ಇ-ಪೋರ್ಟಲ್ ಹ್ಯಾಕ್ ಮಾಡಿ ಸಾರ್ವಜನಿಕರ ಹಣ ಲೂಟಿ ಮಾಡಿದವರ ರಕ್ಷಣೆ ಇಲ್ಲ: ಅರಗ

Public TV
1 Min Read

ಬೆಂಗಳೂರು: ಸರ್ಕಾರದ ಇಲಾಖೆಯ ಇ-ಪೋರ್ಟಲ್ ಹ್ಯಾಕ್ ಮಾಡಿ ಸಾರ್ವಜನಿಕ ಹಣ ಲೂಟಿ ಮಾಡಿದವರು. ಎಷ್ಟೇ ಬಲಾಡ್ಯರಿದ್ದರೂ ಲೆಕ್ಕಿಸದೆ, ಬಂಧಿಸಿ ಹಣ ವಸಾಲಾತಿಗೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಭರವಸೆ ನೀಡಿದರು.

ವಿಧಾನ ಪರಿಷತ್‍ನಲ್ಲಿ ಇಂದು, ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರು, ನಿಯಮ 330 ರ ಅಡಿಯಲ್ಲಿ ಎತ್ತಿದ ವಿಷಯಕ್ಕೆ ಸಂಬಂಧಿಸಿದಂತೆ ಉತ್ತರ ನೀಡಿದ ಸಚಿವರು, ಈ ಸಂಬಂಧ ಇದುವರೆಗೆ ಸುಮಾರು 17 ಮಂದಿಯನ್ನು ಬಂಧಿಸಿ, ಎರಡು ಕೋಟಿಯಷ್ಟು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶ ದ್ರೋಹಿಗಳಂದ್ರೆ ಕಾಂಗ್ರೆಸ್ಸಿಗರು, ಕಾಂಗ್ರೆಸ್ ಅಂದ್ರೆನೆ ದೇಶ ದ್ರೋಹ: ಚೈತ್ರಾ ಕುಂದಾಪುರ

ಹ್ಯಾಕರ್ ಶ್ರೀಕಿ ಹಾಗೂ ಇತರರು ಒಳಗೊಂಡಿದ್ದಾರೆ ಎನ್ನಲಾದ ಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ತನಿಖೆ ತೀವ್ರ ಪ್ರಗತಿಯಲ್ಲಿದೆ. ಯಾರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಆಶ್ವಾಸನೆ ನೀಡಿದರು.

ಇದಕ್ಕೆ ಮುನ್ನ ವಿಷಯ ಪ್ರಸ್ತಾಪಿಸಿದ, ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್, ಬಿಟ್ ಕಾಯಿನ್ ವಿಷಯದಲ್ಲಿ ಯಾವುದೇ ಕ್ರಮವಾಗಿಲ್ಲ. ಸಾವಿರಾರು ಕೋಟಿ ರೂಪಾಯಿಗಳ ಅಕ್ರಮ ಎಸಗಿದ ಆರೋಪ ಎದುರಿಸುತ್ತಿರುವ ಹಲವು ವ್ಯಕ್ತಿಗಳ ವಿರುದ್ಧ ಯಾವುದೇ ಕ್ರಮಗಳು ಆಗಿಲ್ಲ. ಸರ್ಕಾರ ಈ ವಿಷಯದಲ್ಲಿ ಆಸಕ್ತಿ ತೋರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸದಸ್ಯರ ಆರೋಪವನ್ನು ತಳ್ಳಿಹಾಕಿದ ಗೃಹ ಸಚಿವರು, ಸರ್ಕಾರ ಹ್ಯಾಕಿಂಗ್ ವಿಚಾರವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದು, ಯಾರ ಬಳಿಯಾದರೂ ಹೆಚ್ಚಿನ ದಾಖಲೆ ಇದ್ದರೆ ಒದಗಿಸಬೇಕು ಎಂದು ಮನವಿ ಮಾಡಿದರು.

ರೂಪಾಯಿ 11.5 ಕೋಟಿಯಷ್ಟು ಹಣವನ್ನು ಹ್ಯಾಕಿಂಗ್ ಮಾಡಲಾಗಿದ್ದು, ಸುಮಾರು 36 ವಿವಿಧ ಬ್ಯಾಂಕ್ ಖಾತೆಗಳಿಗೆ, ವರ್ಗಾವಣೆ ಮಾಡಲಾಗಿದೆ, ಪೆÇಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ ಎಂದು ಸದನಕ್ಕೆ ಮಾಹಿತಿ ನೀಡಿದರು. ಇದನ್ನೂ ಓದಿ: ನಾನು ಜನರಿಗಾಗಿ ಇದ್ರೆ, ಪ್ರಚಾರಕ್ಕೆ ಕೆಲವರು ಇರುತ್ತಾರೆ: ಹೆಬ್ಬಾಳ್ಕರ್ ವಿರುದ್ಧ ಲಖನ್ ವ್ಯಂಗ್ಯ

ಪರಿಷತ್‍ನಲ್ಲಿ, ವಿರೋಧ ಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್, ಜೆಡಿಎಸ್ ಸದಸ್ಯ ಮರಿ ತಿಬ್ಬೆಗೌಡ, ಬಿಜೆಪಿ ಸದಸ್ಯರಾದ ಆಯನೂರು ಮಂಜುನಾಥ್, ತೇಜಸ್ವಿನಿ ಗೌಡ ಸಹ ಚರ್ಚೆಯಲ್ಲಿ ಪಾಲ್ಗೊಂಡರು.

Share This Article
Leave a Comment

Leave a Reply

Your email address will not be published. Required fields are marked *