ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರಬಾರದು: ಈಶ್ವರಪ್ಪ

Public TV
2 Min Read

ಮೈಸೂರು: ಕರ್ನಾಟಕ (Karnataka) ರಾಜ್ಯದಲ್ಲಿ ಕಾಂಗ್ರೆಸ್ (Congress) ಸರ್ಕಾರ ಇರಬಾರದು ಎಂದು ಮೈಸೂರಿನಲ್ಲಿ (Mysuru) ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ (KS Eshwarappa) ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬರ ಇದೆ. ರೈತರ ಆತ್ಮಹತ್ಯೆಗೆ ಲೆಕ್ಕ ಸಿಗ್ತಾ ಇಲ್ಲ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ಇದೆ. ಒಬ್ಬನೇ ಒಬ್ಬ ಉಸ್ತುವಾರಿ ಸಚಿವ ರೈತರ ಸಮಸ್ಯೆ ಕೇಳಿಲ್ಲ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಂತೂ ಸಿಎಂ ಸ್ಥಾನದ ಬಗ್ಗೆ ಬಡಿದಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ರೈತರು ಆತ್ಮಹತ್ಯೆ ಮಾಡಿಕೊಳ್ಳಲು ರಾಜ್ಯದಲ್ಲಿ ಈ ಸರ್ಕಾರ ತಂದಿದ್ದಾರೆ. ಇದುವರೆಗೂ ಬೆಳೆ ಪರಿಹಾರಕ್ಕಾಗಲಿ, ಬರ ಪರಿಹಾರಕ್ಕಾಗಲಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ನಿಮ್ಮ ನಾಯಕರಾದ ಸುರ್ಜೇವಾಲ, ವೇಣುಗೋಪಾಲ್ ಹೇಳಿದ ಮೇಲೂ ನಿಮ್ಮಿಷ್ಟದ ಹೇಳಿಕೆ ಕೊಡುತ್ತಿದ್ದೀರಾ ಅಂದರೆ ನಿಮ್ಮಲ್ಲಿ ಶಿಸ್ತಿಲ್ಲ. ರೈತರ ಬಗ್ಗೆ ಕಾಳಜಿ ಇಲ್ಲ. ಹೀಗಾಗಿ ಆಡಳಿತದ ಚುಕ್ಕಾಣಿ ಹಿಡಿಯುವ ಅಧಿಕಾರ ಇವರಿಗಿಲ್ಲ ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿಗಳಲ್ಲಿ ಬಸ್ ಮಾತ್ರ ಓಡಾಡ್ತಿದೆ. ಇನ್ಯಾವ ಗ್ಯಾರಂಟಿಯೂ ಯಶಸ್ವಿ ಆಗಿಲ್ಲ. ರಾಜ್ಯದ ಜನರಿಗೆ ಮೋಸ ಮಾಡಿ ಆಡಳಿತ ಮಾಡ್ತಿದ್ದೀರಾ. ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆಗೆ ಹೋಗಿ. ಇದು ಕಾಂಗ್ರೆಸ್ ಸರ್ಕಾರ ಅಲ್ಲ, ಇದು ಸಮ್ಮಿಶ್ರ ಸರ್ಕಾರ. ಒಂದು ಕಡೆ ಸಿದ್ದರಾಮಯ್ಯ ಕಾಂತರಾಜು ವರದಿ ಜಾರಿಗೆ ತರ್ತೀವಿ ಅಂತಾರೆ. ಇನ್ನೊಂದು ಕಡೆ ಒಕ್ಕಲಿಗರ ನೇತೃತ್ವದಲ್ಲಿ ಡಿಕೆ ಶಿವಕುಮಾರ್ ಯಾವುದೇ ಕಾರಣಕ್ಕೂ ಜಾರಿಗೆ ತರಲು ಬಿಡಲ್ಲ ಅಂತಾರೆ. ಒಂದೇ ಪಕ್ಷದ ಸರ್ಕಾರದಲ್ಲಿ ಸಿಎಂ, ಡಿಸಿಎಂ ಬೇರೆ ಬೇರೆ ಹೇಳಿಕೆ ಕೊಡ್ತಾರೆ. ಇದಿರಿಂದ ರಾಜ್ಯದ ಜನ ಯಾಕಾದ್ರೂ ಇವರಿಗೆ ವೋಟ್ ಕೊಟ್ಟೆವೋ ಅಂತಿದ್ದಾರೆ ಎಂದು ಮೈಸೂರಿನಲ್ಲಿ ಕೆಎಸ್ ಈಶ್ವರಪ್ಪ ಹೇಳಿದರು. ಇದನ್ನೂ ಓದಿ: ವಿವಾಹಿತೆಯರಿಗೆ ವರ್ಷಕ್ಕೆ 12,000 ರೂ. ನೀಡುತ್ತೇವೆ: ‘ಮೋದಿ ಕಿ ಗ್ಯಾರಂಟಿ’ ಘೋಷಿಸಿದ ಅಮಿತ್‌ ಶಾ

ಬಿಜೆಪಿ ಲೀಡರ್ ಲೆಸ್, ಜೆಡಿಎಸ್ ಪೀಪಲ್ ಲೆಸ್ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಇಡೀ ದೇಶದಲ್ಲಿ ಯಾವುದೇ ವ್ಯಕ್ತಿ ಕೇಳಿದ್ರೂ ಮೋದಿ ಗೊತ್ತು. ವಿಶ್ವದ ಯಾರನ್ನೇ ಕೇಳಿದ್ರೂ ಈ ದೇಶದ ಪ್ರಧಾನಿ ಯಾರು ಅಂತಾ ಹೇಳ್ತಾರೆ. ನಿಮ್ಮ ನಾಯಕ ಯಾರು? ರಾಹುಲ್ ಗಾಂಧಿನಾ? ಲೀಡರ್ ಲೆಸ್ ಅಂತಾ ಹೇಳೊದು ಬಹಳ ಸುಲಭ. ರಾಜ್ಯದಲ್ಲಿ ನಿಮ್ಮ ಇಬ್ಬರು ಲೀಡರ್‌ಗಳು ಕುಸ್ತಿ ಆಡ್ತಿದ್ದಾರೆ. ಇದನ್ನು ಲೀಡರ್ ಪಕ್ಷ ಅಂತಾ ಕರೆಯುತ್ತೀರಾ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಈಶ್ವರಪ್ಪ ಪ್ರಶ್ನೆಯಿಟ್ಟರು.

ನಾವು ಹೆಮ್ಮೆಯಿಂದ ಹೇಳಿಕೊಳ್ತೀವಿ ನಮ್ಮ ನಾಯಕ ಮೋದಿ ಅಂತಾ. ಯಾವ ಹಳ್ಳಿಯಲ್ಲಿ ನಿಮ್ಮ ರಾಹುಲ್ ಗಾಂಧಿ ಹೆಸರು ಹೇಳುತ್ತಾರೆ? ಪ್ರಿಯಾಂಕ್ ಖರ್ಗೆಗೆ ಮಾನ-ಮರ್ಯಾದೆ ಇದ್ದಿದ್ರೆ ಪ್ರಾರಂಭದಲ್ಲಿ ಸಿದ್ದರಾಮಯ್ಯ ಸಿಎಂ ಆಗಿರಲಿ ಅಂದವರು ಈಗ ನಾನೇ ಸಿಎಂ ಎನ್ನುವ ಮಟ್ಟಕ್ಕೆ ಬೆಳೆದಿದ್ದಾರೆ. ಇದು ಯಾವ ನ್ಯಾಯ? ಸಿದ್ದರಾಮಯ್ಯ ಸಿಎಂ ಅಂತಿದ್ದ ಸಚಿವ ರಾಜಣ್ಣ ನಿನ್ನೆ ಇದ್ದಕ್ಕಿದ್ದಂತೆ ಪರಮೇಶ್ವರ್ ಸಿಎಂ ಆಗಲಿ ಅಂದಿದ್ದಾರೆ. ಸಿದ್ದರಾಮಯ್ಯರನ್ನು ಕೈ ಬಿಟ್ಟರು. ಈಗ ಕಾಂಗ್ರೆಸ್‌ಗೆ ಬಂದಿರುವ ದುಸ್ಥಿತಿ ಹಿಂದೆ ಯಾವ ಸರ್ಕಾರಕ್ಕೂ ಬಂದಿಲ್ಲ. ಹೀಗಾಗಿ ರಾಜೀನಾಮೆ ಕೊಟ್ಟು ಹೋಗಿ ಎಂದು ಕೆಎಸ್ ಈಶ್ವರಪ್ಪ ಹೇಳಿಕೆ ನೀಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ.. ನಾನು ಕತ್ತಲಲ್ಲಿ ಇದ್ದೇನೆ:‌ ಟಿ.ಬಿ.ಜಯಚಂದ್ರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್