ಸಿಎಂ ಸ್ಥಾನದಿಂದ ಇಳಿಸಿದ್ರೆ ರಾಜ್ಯದಲ್ಲಿ ದೊಡ್ಡ ಮಟ್ಟದ ಹೋರಾಟ: ವಾಟಾಳ್‌

1 Min Read

ರಾಮನಗರ: ಸಿಎಂ ಸಿದ್ದರಾಮಯ್ಯ (CM Siddaramaiah) ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದರೆ ರಾಜ್ಯದಲ್ಲಿ ಶಾಂತಿ ಉಳಿಯಲ್ಲ, ದೊಡ್ಡ ಮಟ್ಟದ ಹೋರಾಟ ನಡೆಲಿದೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಬುದ್ಧ ವ್ಯಕ್ತಿ, ಅನುಭವಿ ರಾಜಕಾರಣಿ. ಅತಿಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಸಿದ್ದರಾಮಯ್ಯನವರ ರಾಜಕೀಯ ಹಿನ್ನೆಲೆ ಉತ್ತಮವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿರೋಧ ಮಧ್ಯೆ ದ್ವೇಷ ಭಾಷಣ ಮಸೂದೆ ಪಾಸ್‌ – ಪ್ರತಿಯನ್ನು ಹರಿದು ಹಾಕಿ ವಿಪಕ್ಷಗಳಿಂದ ಆಕ್ರೋಶ

 

 ಇನ್ನು‌ ಮುಂದೆ ದರೋಡೆಕೋರರು, ಹಣವುಳ್ಳವರು ಸಿಎಂ ಸ್ಥಾನಕ್ಕೆ ಬರುತ್ತಾರೆ. ಕಾರ್ಪೋರೆಟ್ ಗಳು ಹಣ ಹಾಕಿ ಅವರಿಗೆ ಬೇಕಾದವರನ್ನ ಅಧಿಕಾರಕ್ಕೆ ತರಲು ಹೊರಟಿದ್ದಾರೆ. ಇದಕ್ಕೆ ಕಾಂಗ್ರೆಸ್ ಹೈಕಮಾಂಡ್ ಮಣೆ ಹಾಕಬಾರದು. ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗ ಇಳಿಸಿದರೆ ರಾಜ್ಯದಲ್ಲಿ ಶಾಂತಿ ಉಳಿಯುವುದಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಬಿಟ್ಟರೆ ಕಾಂಗ್ರೆಸ್, ಬಿಜೆಪಿ ಯಾವ ಪಕ್ಷದಲ್ಲೂ ಸಿಎಂ ಅಭ್ಯರ್ಥಿಗಳಿಲ್ಲ. ಸಿದ್ದರಾಮಯ್ಯರನ್ನ ತೆಗೆದು ಹೈಕಮಾಂಡ್ (Congress High Command) ಅದನ್ನ ಅಷ್ಟು ಸುಲಭವಾಗಿ ಜೀರ್ಣಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

Share This Article