ಮಂಗಳೂರು: ಧರ್ಮಸ್ಥಳದ (Dharmasthala) ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್‌ಆರ್ ವಿಶ್ವನಾಥ್ (SR Vishwanath) ನೇತೃತ್ವದಲ್ಲಿ ಧರ್ಮಸ್ಥಳ ಚಲೋ (Dharmasthala Chalo) ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.
ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್ ಬಿಜೆಪಿಯ ಸೃಷ್ಟಿ: ಈಶ್ವರ್ ಖಂಡ್ರೆ ಬಾಂಬ್
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ
ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ.