ತಮಿಳುನಾಡಿನಲ್ಲಿ ಹಣದ ಆಮಿಷವೊಡ್ಡಿ ಧರ್ಮಸ್ಥಳಕ್ಕೆ ಕರೆಸಿದ್ದರು: ಸತ್ಯ ಕಕ್ಕಿದ ಚಿನ್ನಯ್ಯ

Public TV
1 Min Read

ಬೆಂಗಳೂರು: ತಮಿಳುನಾಡಿನಲ್ಲಿದ್ದ (Tamil Nadu) ಚೆನ್ನಯ್ಯಗೆ ಹಣದ ಆಮಿಷವೊಡ್ಡಿ ಧರ್ಮಸ್ಥಳ (Dharmasthala) ವಿರೋಧಿ ಗ್ಯಾಂಗ್‌ ಕರೆದುಕೊಂಡು ಬಂದ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ.

ಹೌದು. ವಿಶೇಷ ತನಿಖಾ ತಂಡ (SIT) ತಮ್ಮ ಎಂದಿನ ಪೊಲೀಸ್‌ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಚೆನ್ನಯ್ಯ ಸತ್ಯ ಕಕ್ಕಿ ತಪ್ಪೊಪ್ಪಿಕೊಂಡಿರುವ ವಿಚಾರ ಎಸ್‌ಐಟಿ ಮೂಲಗಳಿಂದ ತಿಳಿದು ಬಂದಿತ್ತು.  ಇದನ್ನೂ ಓದಿ: ಎಲ್ಲಿಂದಲೋ ಬುರುಡೆ ತಂದು ಬುರುಡೆ ಬಿಟ್ಟಿದ್ದ ಚೆನ್ನಯ್ಯ!

ಮೂಲಗಳ ಪ್ರಕಾರ ಧರ್ಮಸ್ಥಳಕ್ಕೆ ಬರುವ ಮೊದಲೇ ಮೂರು ಬಾರಿ ಈತನನ್ನು ತಂಡ ಭೇಟಿ ಮಾಡಿತ್ತು.

 

ಚಿನ್ನಯ್ಯ ಹೇಳಿದ್ದೇನು?
ಡಿಸೆಂಬರ್ ಕೊನೆಯ ವಾರದಲ್ಲಿ ತಮಿಳುನಾಡಿನಲ್ಲಿದ್ದ ನನ್ನನ್ನು ಧರ್ಮಸ್ಥಳ ದೇವಸ್ಥಾನದ ವಿರೋಧಿ ಗ್ಯಾಂಗ್‌ ಸಂಪರ್ಕಿಸಿತ್ತು. ಮಾತುಕತೆ ನಡೆಸುವ ವೇಳೆ ಹಣದ ಆಮಿಷ ಒಡ್ಡಿದ್ದರು. ಈ ಪ್ರಕರಣದ ಮುಖ್ಯ ನಾಯಕ ನೀನು. ನಿನ್ನಿಂದಲೇ ಈ ಪ್ರಕರಣಕ್ಕೆ ರೋಚಕ ತಿರುವು ಸಿಗುತ್ತದೆ ಎಂದು ಹೇಳಿದ್ದರು.

ಯಾವುದೇ ಕಾರಣಕ್ಕೂ ನೀನು ಭಯ ಪಡುವ ಅಗತ್ಯವಿಲ್ಲ. ತನಿಖೆಯಾದ ನಂತರ ಹಲವು ಜನ ದೂರುದಾರರು ಬರುತ್ತಾರೆ. ಎಲ್ಲ ತನಿಖೆ ನಡೆಯುತ್ತದೆ ಎಂದು ಭರವಸೆ ನೀಡಿದ್ದರು.

ಆರಂಭದಲ್ಲಿ ಬೆಂಗಳೂರಿನಲ್ಲಿ ನನಗೆ ಸ್ವಲ್ಪ ತರಬೇತಿ ನೀಡಲಾಗಿತ್ತು. ಪೊಲೀಸರು ಕೇಳಿದಾಗ ಯಾವ ರೀತಿ ಉತ್ತರ ಹೇಳಬೇಕು ಎನ್ನುವುದನ್ನು ತಿಳಿಸಲಾಗಿತ್ತು. ನಂತರ ಸೂತ್ರಧಾರರು ಹೇಳಿದಂತೆ ನಾನು ಪಾತ್ರ ಮಾಡುತ್ತಿದ್ದೆ. ಅವರು ಹೇಳಿದಂತೆ ನಾನು ಮಾಹಿತಿ ನೀಡುತ್ತಿದ್ದೆ ಎಂದು ಚಿನ್ನಯ್ಯ ತಿಳಿಸಿದ್ದ.

Share This Article