ಚಳ್ಳಕೆರೆಮ್ಮ ದೇಗುಲಕ್ಕೆ ಕನ್ನ- ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

Public TV
1 Min Read

ಚಿತ್ರದುರ್ಗ:  ನಗರದೇವತೆಯಾದ ಶ್ರೀ ಚಳ್ಳಕೆರೆಮ್ಮ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದು, ಆ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪಟ್ಟಣದ ಬಳ್ಳಾರಿ ರಸ್ತೆಯಲ್ಲಿರುವ ಶ್ರೀ ಚಳ್ಳಕೆರಮ್ಮ ದೇವಸ್ಥಾನದಲ್ಲಿ ಮಂಗಳವಾರ ರಾತ್ರಿ ದೇವಸ್ಥಾನದ ಕಬ್ಬಿಣದ ಕಂಬಿಗಳನ್ನು ಮುರಿದು ಒಳನುಗ್ಗಿರುವ ಕಳ್ಳರು, ದೇವಸ್ಥಾನದ ಒಳಗಿದ್ದ ಹುಂಡಿಗಳ ಬೀಗ ಮುರಿದು ಹುಂಡಿಯಲ್ಲಿ ಇದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಹಿಂದೂ ಪುರಾತನ ದೇವಾಲಯವನ್ನು ಪುನರ್‌ನಿರ್ಮಿಸಲು ಆದೇಶಿದ ಪಾಕ್ ನ್ಯಾಯಮೂರ್ತಿ

ಪಟ್ಟಣದ ಮುಖ್ಯ ರಸ್ತೆಯಲ್ಲಿರುವ ದೇಗುಲದಲ್ಲಿಯೇ ಕಳವು ಆಗಿರೋದು ಭಕ್ತರಲ್ಲಿ ಬಾರಿ ಆತಂಕ ಮೂಡಿಸಿದೆ. ಜನಜಂಗುಲಿ ಪ್ರದೇಶದಲ್ಲಿ ಇಂತಹ ಪ್ರಕರಣ ನಡೆದಿರೋದು ಅಚ್ಚರಿ ಮೂಡಿಸಿದೆ. ಹೀಗಾಗಿ ಘಟನಾ ಸ್ಥಳಕ್ಕೆ ಚಳ್ಳಕೆರೆ ತಹಶೀಲ್ದಾರರಾದ ಎನ್.ರಘುಮೂರ್ತಿ, ಪೊಲೀಸ್ ಇನ್ಸಪೇಕ್ಟರ್ ಜೆ.ತಿಪ್ಪೇಸ್ವಾಮಿ, ಪಿಎಸ್‍ಐ ಮಹೇಶ್ ಗೌಡ ಭೇಟಿ ನೀಡಿದ್ದು, ದೇವಸ್ಥಾನದ ಸುತ್ತಮುತ್ತಲಿನ ಸಿಸಿಟಿವಿಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.

ಸಿಸಿಟಿವಿ ಪರಿಶೀಲನೆ ನಡೆಸಿದಾಗ ಕಾಣಿಕೆ ಹುಂಡಿಗೆ ಕನ್ನ ಹಾಕಿದ ದೃಶ್ಯ ಸೆರೆಯಾಗಿದೆ. ಇಂದು ಬೆಳಗ್ಗಿನ ಜಾವ 4 ಗಂಟೆ ಸಮಯದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ದೇಗುಲದ ಹಿಂಬದಿಯ ಕಬ್ಬಿಣದ ಸಲಾಕೆ ತುಂಡರಿಸಿ ದೇಗುಲ ಪ್ರವೇಶ ಮಾಡಿರುವ ಇಬ್ಬರು ಕಳ್ಳರು, ದೇಗುಲದ 2 ಹುಂಡಿಯಲ್ಲಿನ ಹಣ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ.  ಇದನ್ನೂ ಓದಿ: ಕೇರಳ ಪೊಲೀಸರಿಂದ ಶೃಂಗೇರಿ ಮೂಲದ ನಕ್ಸಲರ ಬಂಧನ 

ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *