‘ತಿರುವನಂತಪುರಂ-ಕಾಸರಗೋಡು’ ವಂದೇ ಭಾರತ್ ಎಕ್ಸ್‌ಪ್ರೆಸ್ ಮಂಗಳೂರಿಗೂ ವಿಸ್ತರಣೆ

By
1 Min Read

ಮಂಗಳೂರು: ತಿರುವನಂತಪುರಂ-ಕಾಸರಗೋಡು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲನ್ನು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) ಅವರ ಮನವಿಯ ಮೇರೆಗೆ ಮಂಗಳೂರಿನವರೆಗೆ (Mangaluru) ವಿಸ್ತರಣೆ ಮಾಡಲಾಗಿದೆ.

ಇಂದು (ಫೆ.21) ರೈಲ್ವೆ ಮಂಡಳಿ ಹೊರಡಿಸಿರುವ ಆದೇಶದ ಪ್ರಕಾರ, ವಂದೇ ಭಾರತ್ ರೈಲು ಇನ್ನು ಮುಂದೆ ತಿರುವನಂತಪುರ-ಮಂಗಳೂರು ನಡುವೆ ಸಂಚರಿಸಲಿದೆ. ಹೊಸ ರೈಲ್ವೆ ವೇಳಾ ಪಟ್ಟಿಯಂತೆ ಈ ರೈಲು ಮಂಗಳೂರಿನಿಂದ ಬೆಳಗ್ಗೆ 06:15ಕ್ಕೆ ಹೊರಟು ಅಪರಾಹ್ನ 3:05ಕ್ಕೆ ತಿರುವನಂತಪುರಂ ಅನ್ನು ತಲುಪಲಿದೆ. ಹಾಗೆಯೇ ತಿರುವನಂತಪುರಂನಿಂದ ಸಂಜೆ 4:05ಕ್ಕೆ ಹೊರಟು ಮಂಗಳೂರನ್ನು ರಾತ್ರಿ 12:40ಕ್ಕೆ ತಲುಪಲಿದೆ.

ಬುಧವಾರ ಹೊರತು ಪಡಿಸಿ ವಾರದ 6 ದಿನಗಳೂ ವಂದೇ ಭಾರತ್ ರೈಲು ಸಂಚರಿಸಲಿದೆ. ಸಂಸದರ ಮನವಿ ಪುರಸ್ಕರಿಸಿ ವಂದೇ ಭಾರತ್ ರೈಲನ್ನು ಮಂಗಳೂರುವರೆಗೆ ವಿಸ್ತರಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ (Ashwini Vaishnav) ಅವರಿಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.

Share This Article