ಮಂಡ್ಯ: ತಿಥಿ(Thithi) ಸಿನಿಮಾ ಖ್ಯಾತಿಯ ಸೆಂಚುರಿ ಗೌಡ(Century Gowda) ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿಂಗ್ರೆಗೌಡ ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಮಂಡ್ಯ (Mandya) ಜಿಲ್ಲೆ ಪಾಂಡವಪುರ ತಾಲೂಕಿನ ಸಿಂಗ್ರೆಗೌಡನ ಕೊಪ್ಪಲು ಗ್ರಾಮದಲ್ಲಿ ನೆಲೆಸಿದ್ದ ಸಿಂಗ್ರೆಗೌಡ ತಿಥಿ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸೆಂಚುರಿ ಗೌಡ ಎಂದೇ ಖ್ಯಾತಿ ಪಡೆದಿದ್ದರು.
100 ವರ್ಷ ವಯಸ್ಸು ದಾಟಿದ್ದರಿಂದ ಸಿನಿಮಾದಲ್ಲೂ ಸೆಂಚುರಿ ಗೌಡ ಪಾತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡದ ಸಿನಿ ಪ್ರೇಮಿಗಳಿಗೆ ಇಷ್ಟವಾಗಿದ್ದರು. ಇದನ್ನೂ ಓದಿ: ನಾವು ಒತ್ತುವರಿ ಮಾಡಿಲ್ಲ, ಕಾನೂನು ಪ್ರಕಾರ ಜಾಗ ಪಡೆದಿದ್ದೇವೆ: ಯಶ್ ತಾಯಿ ರಿಯಾಕ್ಷನ್

