ತೋಂಟದಾರ್ಯ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

Public TV
1 Min Read

ಗದಗ: ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಶನಿವಾರ ಬೆಳಗಿನ ಜಾವ ತೀವ್ರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.

ಸಿದ್ದಲಿಂಗ ಸ್ವಾಮೀಜಿ ಅವರಿಗೆ ಇಂದು ಬೆಳಗಿನ ಜಾವ ಹೃದಯಘಾತ ಕಾಣಿಸಿಕೊಂಡಿದೆ. ಬಳಿಕ ಅವರನ್ನು ಜಿಲ್ಲೆಯ ಚೀರಾಯು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸ್ವಾಮೀಜಿ ನಿಧನರಾಗಿದ್ದಾರೆ.

ಇಂದು ಬೆಳಗ್ಗೆ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಸ್ವಾಮೀಜಿಗೆ ಹೃದಯಘಾತವಾಗಿದೆ. ಈ ವೇಳೆ ಪೂಜೆಗೆಂದು ಸೇವಕರು ಎಬ್ಬಿಸಿದ್ದಾರೆ. ಆಗ ಅವರು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೋಣೆಯ ಒಳಗೆ ಹೋಗಿ ನೋಡಿದಾಗ ಅವರ ಆರೋಗ್ಯ ಸ್ಥಿತಿ ಸರಿಯಿರಲಿಲ್ಲ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇತ್ತೀಚೆಗೆ ಕಳೆದ ಆರು ತಿಂಗಳಿಂದ ಕಾಲು ಮತ್ತು ಇತರೆ ನೋವುಗಳಿಂದ ಸ್ವಾಮೀಜಿ ಬಳಲುತ್ತಿದ್ದರು. ಬಳಿಕ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆಗ ಯಾವುದೇ ರೀತಿ ಕಾಯಿಲೆ ಅವರಿಗೆ ಇರಲಿಲ್ಲ. ಆದರೆ ಇಂದು ಹೃದಯಘಾತವಾಗಿ ಮೃತಪಟ್ಟಿದ್ದಾರೆ ಎನ್ನುವ ವಿಚಾರ ತಿಳಿದುಬಂದಿದೆ.

ಶುಕ್ರವಾರ ರಾತ್ರಿ ಪೂಜೆ ಮಾಡಿ ವಿಶ್ರಾಂತಿ ಪಡೆದುಕೊಂಡಿದ್ದರು. ಮುಂಜಾನೆ 6 ಗಂಟೆಗೆ ಏಳುತ್ತಿದ್ದರು. ಆದರೆ ಶನಿವಾರ ಬೆಳಗ್ಗೆ 7.30ರ ಸಮಯವಾದರೂ ನಿದ್ದೆಯಿಂದ ಎದ್ದಿರಲಿಲ್ಲ.. ನಾವು ಕಿಟಿಕಿಯಿಂದ ನೋಡಿದಾಗ ಕುಳಿತಿದ್ದರು. ಮಠದಲ್ಲಿಯೇ ಕೋಣೆಯಲ್ಲಿ ಕುಳಿತ ಸ್ಥಳದಲ್ಲಿ ಲೋ ಬಿಪಿಯಾಗಿ ಹೃದಯಾಘಾತವಾಗಿ ಮೃತ ಪಟ್ಟಿದ್ದಾರೆ ಎಂದು ತೋಂಟದಾರ್ಯ ಮಠದ ಆಡಳಿತಾಧಿಕಾರಿ ಪಟ್ಟಣ್ಣಶೆಟ್ಟರ್ ಹೇಳಿದ್ದಾರೆ.

ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ವಿಚಾರದಲ್ಲಿ ಸಿದ್ದಲಿಂಗ ಸ್ವಾಮೀಜಿ ಸಕ್ರೀಯವಾಗಿ ಭಾಗವಹಿಸುತ್ತಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *