ಬೆಂಗಳೂರು: ಪ್ರಗತಿಪರ ಸಾಹಿತಿಗಳನ್ನು ಹತ್ಯೆ ಮಾಡುವುದಾಗಿ ಪತ್ರ ಬರೆದಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. 7 ಮಂದಿ ಸಾಹಿತಿಗಳಿಗೂ ಒಬ್ಬನೇ ಆರೋಪಿ ಪತ್ರ ಬರೆದ ವಿಚಾರ ಸಿಸಿಬಿ ಪೊಲೀಸರ (CCB Police) ತನಿಖೆಯಿಂದ ಬೆಳಕಿಗೆ ಬಂದಿದೆ.
ಒಂದೇ ಒಂದು ಕೈಬರಹದಿಂದ ಕೊಲೆ ಬೆದರಿಕೆ ಬಂದಿದೆ ಎನ್ನುವುದು ವಿಧಿ ವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಯಿಂದ ದೃಢಪಟ್ಟಿದೆ. ದಾವಣಗೆರೆ ಮೂಲದಿಂದ ಪತ್ರ ಬಂದಿರುವುದು ಖಚಿತವಾಗಿದ್ದು, ಬೇರೆ ಬೇರೆ ತಾಲೂಕು, ಜಿಲ್ಲೆಗಳಿಗೆ ಹೋಗಿ ಪೋಸ್ಟ್ ಮಾಡಲಾಗಿದೆ. ಇದನ್ನೂ ಓದಿ: ತನಗಿಂತ 2 ವರ್ಷ ಕಿರಿಯವನನ್ನ ಪ್ರೀತಿಸಿ ಮದ್ವೆಯಾಗಿದ್ದ ವಿವಾಹಿತೆ ಆತ್ಮಹತ್ಯೆ
ಪ್ರೊ. ಕೆ. ಮರುಳಸಿದ್ದಪ್ಪ, ಪ್ರೊ. ಎಸ್.ಜಿ. ಸಿದ್ಧರಾಮಯ್ಯ, ಬಂಜಗೆರೆ ಜಯಪ್ರಕಾಶ್, ವಸುಂಧರಾ ಭೂಪತಿ, ಕುಂ.ವೀರಭದ್ರಪ್ಪ ಸೇರಿದಂತೆ 15ಕ್ಕೂ ಹೆಚ್ಚು ಲೇಖಕರಿಗೆ ಒಂದು ವರ್ಷದಿಂದ ಬೆದರಿಕೆ ಪತ್ರಗಳು ಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಸ್ವೀಕರಿಸಿದೆ.
ಈ ಬಗ್ಗೆ ಹಿಂದೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಪರಮೇಶ್ವರ್, ಬೆದರಿಕೆಗೆ ಒಳಗಾಗಿರುವ ಸಾಹಿತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ನೀಡಲು ಕಮಿಷನರ್, ಡಿಜಿಪಿ ಅವರಿಗೆ ಸೂಚನೆ ಕೊಡಲಾಗಿದೆ ಎಂದು ತಿಳಿಸಿದ್ದರು.
Web Stories