ಹಲಸೂರು ಗುರುದ್ವಾರಕ್ಕೆ ಬಾಂಬ್ ಬೆದರಿಕೆ – ಬಾತ್ರೂಮ್‌ನಲ್ಲಿ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖ

By
1 Min Read

ಬೆಂಗಳೂರು: ಹಲಸೂರು (Ulsoor) ಮುಖ್ಯ ರಸ್ತೆಯಲ್ಲಿರುವ ಗುರುದ್ವಾರಕ್ಕೆ (Gurudwara) ಬಾಂಬ್ ಬೆದರಿಕೆ (Bomb Threat) ಬಂದಿದ್ದು, ಬಾತ್ರೂಮ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಮೇಲ್‌ನಲ್ಲಿ ಉಲ್ಲೇಖಿಸಿದ್ದಾರೆ.

ಹಲಸೂರು ಕೆರೆ ಬಳಿಯಿರುವ ಗುರುಸಿಂಗ್ ಸಭಾ ಗುರುದ್ವಾರಕ್ಕೆ ಕಳೆದ 4 ದಿನದ ಹಿಂದೆ `De-Brahminize Dravidistan’ ಎಂಬ ಸಂಘಟನೆಯಿಂದ ರಾಜ ಗಿರಿ ಎಂಬಾತನ ಹೆಸರಿನಲ್ಲಿ ಗುರುದ್ವಾರದ ಅಧಿಕೃತ ಮೇಲ್ ಐಡಿಗೆ ಬಾಂಬ್ ಬೆದರಿಕೆ ಬಂದಿದೆ. ಮೇಲ್‌ನಲ್ಲಿ, ಶೀಘ್ರವೇ 4 RDX IED ನಿಮ್ಮ ಗುರುದ್ವಾರದ ಬಾತ್ರೂಮ್‌ನಲ್ಲಿ ಬಾಂಬ್ ಸ್ಫೋಟಿಸುತ್ತದೆ. 8 ಗಂಟೆಯೊಳಗೆ ಎಲ್ಲವನ್ನೂ ಸ್ಥಳಾಂತರಿಸಿ ಎಂದು ಬರೆದಿದ್ದಾರೆ.ಇದನ್ನೂ ಓದಿ: ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿಯಲ್ಲಿ ಮೇಘಸ್ಫೋಟ – ಹಲವರು ನಾಪತ್ತೆ ಶಂಕೆ

ಈ ಕುರಿತು ಋಷಿಪಾಲ್ ಸಿಂಗ್ ಎಂಬುವವರು ಹಲಸೂರು ಪೊಲೀಸ್ ಠಾಣೆಗೆ (Ulsoor Police Station) ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಂಡಿದ್ದಾರೆ.ಇದನ್ನೂ ಓದಿ: ಹಾಸನ | ರಸ್ತೆಗೆ ಮರ ಕೆಡವಿ ವಾಹನ ಸವಾರರನ್ನು ತಡೆದ ಗಜರಾಜ!

Share This Article