ಮಗಳ ಅಶ್ಲೀಲ ವೀಡಿಯೋ ಹೊರಬಿಡುವ ಬೆದರಿಕೆ; 20 ಲಕ್ಷಕ್ಕೆ ಬೇಡಿಕೆಯಿಟ್ಟ ಮೂವರು ಯುವಕರ ಬಂಧನ

Public TV
1 Min Read

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳನಗರದದ ತರಕಾರಿ ವ್ಯಾಪಾರಿಯನ್ನು ಹೆದರಿಸಿ 20 ಲಕ್ಷ ರೂ. ಸುಲಿಗೆ ಮಾಡಲು ಯತ್ನಿಸಿದ ಮೂವರು ಯುವಕರನ್ನು ಭಟ್ಕಳ ಶಹರ ಪೊಲೀಸರು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ.

ಭಟ್ಟಗಾಂವ್, ಕಿದ್ವಾಯಿ ರಸ್ತೆಯ ನಿವಾಸಿಯೊಬ್ಬ ಅಂಗಡಿಯಲ್ಲಿ ಇದ್ದಾಗ, ಆಗಸ್ಟ್ 16 ರ ರಾತ್ರಿ ಒಬ್ಬ ಅಪರಿಚಿತನಿಂದ ಕರೆ ಬಂದು, ‘ನಿನ್ನ ಮಗಳ ಖಾಸಗಿ ಫೋಟೋ, ವೀಡಿಯೋ ನನ್ನ ಬಳಿ ಇದೆ. ತಕ್ಷಣ 20 ಲಕ್ಷ ಕೊಡಬೇಕು. ಇಲ್ಲವಾದರೆ ಎಲ್ಲರಿಗೂ ಕಳುಹಿಸಿ ನಿನ್ನ ಮಾನ ಹಾಳು ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದ.

ನಂತರ ಆಗಸ್ಟ್ 18 ಮತ್ತು 19ರಂದು ವ್ಯಾಪಾರಿಯ ಪತ್ನಿಯ ಮೊಬೈಲ್‌ಗೆ ಕರೆ ಮಾಡಿ, ’15 ಲಕ್ಷ ಆದರೂ ಕೊಡಬೇಕು’ ಎಂದು ಒತ್ತಾಯಿಸಿದ್ದ. ಬೆದರಿಕೆಗಳಿಂದ ಕಂಗಾಲಾದ ವ್ಯಾಪಾರಿ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಮೇಲೆ ಕಾರ್ಯಪ್ರವೃತ್ತರಾದ ಇನ್ಸ್‌ಪೆಕ್ಟರ್ ದಿವಾಕರ ಹಾಗೂ ಪಿಎಸ್‌ಐ ನವೀನ್ ನಾಯ್ಕ ನೇತೃತ್ವದ ಪ್ರತ್ಯೇಕ ತಂಡ ರಚಿಸಿ ಆರೋಪಿಗಳಾದ ಮೊಹಮ್ಮದ ಫಾರಿಸ್, ಮೊಹಮ್ಮದ ಅರ್ಶದ್‌, ಅಮನ್ ಇಂಜಿನಿಯರಿಂಗ್ ವಿದ್ಯಾರ್ಥಿ. ಆರೋಪಿತರನ್ನು ಪತ್ತೆ ಹಚ್ಚಿ ಬಂಧಿಸಿದೆ. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಕಾರ್ಯಾಚರಣೆ ಮಹೇಶ್ ಮಾರ್ಗದರ್ಶನದಲ್ಲಿ ನಡೆದಿದೆ. ಠಾಣೆಯ ಸಿಬ್ಬಂದ್ದಿ ದಿನೇಶ ನಾಯಕ, ವಿನಾಯಕ ಪಾಟೀಲ್, ನಾಗರಾಜ ಮೊಗೇರ, ಮಹಾಂತೇಶ ಹಿರೇಮಠ, ಕಾಶಿನಾಥ ಕೊಟಗುಣಸಿ, ಲೊಕೇಶ ಕತ್ತಿ, ಮಹೇಶ ಅಮಗೋತ ರಾಘವೇಂದ್ರ ಗೌಡ, ಜಗದೀಶ ನಾಯ್ಕ ಹಾಗೂ ಜಿಲ್ಲಾ ತಾಂತ್ರಿಕ ವಿಭಾಗದ ಸಿಬ್ಬಂದಿ ಬಬನ್ ಮತ್ತು ಉದಯ ಅವರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Share This Article