ಮಂಡ್ಯ | ವಿಸಿ ನಾಲೆಯಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಮೂವರು ಮಕ್ಕಳ ದುರ್ಮರಣ

Public TV
1 Min Read

ಮಂಡ್ಯ: ಈಗಲು ಹೋಗಿದ್ದ ಒಂದೇ ಕುಟುಂಬದ ಮೂವರು ಮಕ್ಕಳು ವಿಸಿ ನಾಲೆಯಲ್ಲಿ (VC Canal) ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ನಾರ್ತ್ ಬ್ಯಾಂಕ್ ಬಳಿ ಘಟನೆ ನಡೆದಿದೆ. ಸೋನು (17), ಸಿಮ್ರಾನ್ (16), ಸಿದ್ದೀಶ್ (9) ಮೃತರು. ಇದನ್ನೂ ಓದಿ: IISC, IIT ಮಾದರಿ ಸಂಸ್ಥೆಗಳಿಂದ ಪರಿಶೀಲನೆ, ಎಲ್ಲ ಕೈಗಾರಿಕೆಗಳ ಮಾಲಿನ್ಯ ಅಧ್ಯಯನಕ್ಕೆ ಸೂಚನೆ: ಎಂ.ಬಿ.ಪಾಟೀಲ್

ಮೈಸೂರಿನ (Mysuru) ಗೌಸಿಯಾನಗರದ ಈ ಮೂವರು ಚಿಕ್ಕಾಯರಹಳ್ಳಿ ಮಾರಮ್ಮ ಜಾತ್ರೆಗೆ ಬಂದಿದ್ದರು. ಇದೇ ವೇಳೆ ಈಜಲು ಹೋಗಿ ವಿಸಿ ನಾಲೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಸಿಗ್ನಲ್ ಜಂಪ್ ಮಾಡಲು ಹೋಗಿ ರಸ್ತೆ ಮಧ್ಯೆ ಪ್ರಾಣ ಬಿಟ್ಟ ಬೈಕ್ ಸವಾರ

ಸದ್ಯ ಸೋನು, ಸಿದ್ದೀಶ್‌ನ ಮೃತದೇಹ ಪತ್ತೆಯಾಗಿದ್ದು, ಉಳಿದ ಸಿಮ್ರಾನ್ ಮೃತದೇಹಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಕೆ.ಆರ್.ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮೈಸೂರು ಮಹಾರಾಜರಿಗೆ ಸೇರಿರುವ 4,500 ಎಕ್ರೆ ಭೂಮಿ ವರ್ಗಕ್ಕೆ ಪ್ರಮೋದಾದೇವಿ ಪತ್ರ

40ಕ್ಕೂ ಹೆಚ್ಚು ಮಂದಿ ಜಲ ಸಮಾಧಿ
ಸಾವಿರಾರು ಎಕರೆ ಪ್ರದೇಶಕ್ಕೆ ಕಾವೇರಿ (Cauvery) ಜೀವಾಮೃತವನ್ನು ಉಣಿಸುವ ಮಂಡ್ಯ ಜಿಲ್ಲೆ ವಿಸಿ ನಾಲೆ (VC Canal) ಇದೀಗ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಸಾವಿನ ಕೂಪವಾಗಿ ಬದಲಾಗಿದೆ. 2018 ರಿಂದ ಇಲ್ಲಿಯವರೆಗೆ ನಡೆದಿರುವ ವಿಸಿ ನಾಲೆ ದುರಂತದಲ್ಲಿ 40ಕ್ಕೂ ಹೆಚ್ಚು ಮಂದಿ ಜಲಸಮಾಧಿಯಾಗಿದ್ದಾರೆ. ಅಂದಿನ ಇಂದಿನವರೆಗೂ ತಡೆಗೋಡೆ ನಿರ್ಮಾಣಕ್ಕೆ ಸ್ಥಳೀಯರು ಆಗ್ರಹಿಸುತ್ತಲೇ ಇದ್ದಾರೆ. ಅದರೆ ಜಿಲ್ಲಾಡಳಿತ ದುರಂತ ಸಂಭವಿಸಿದ ವೇಳೆ ತಡೆಗೋಡೆ ನಿರ್ಮಾಣದ ಭರವಸೆ ನೀಡಿ ಕೈ ತೊಳೆದುಕೊಳ್ಳುತ್ತಿದೆ.

Share This Article