ಮೂರು ಡಿಸಿಎಂ ಹುದ್ದೆ ಹೈಕಮಾಂಡ್ ತೀರ್ಮಾನ ಮಾಡುತ್ತೆ: ಯತೀಂದ್ರ ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: 3 ಡಿಸಿಎಂ (DCM) ಮಾಡುವ ಬಗ್ಗೆ ಹೈಕಮಾಂಡ್ (High Command) ನಿರ್ಧಾರ ಮಾಡುತ್ತದೆ. ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.

ನೂತನವಾಗಿ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ನನ್ನ ಮೇಲೆ ನಂಬಿಕೆ ಇಟ್ಟು ಪರಿಷತ್ ಸ್ಥಾನ ನೀಡಿದೆ. ಪಕ್ಷದ ವರಿಷ್ಠರಿಗೆ ನಾನು ಚಿರಋಣಿ ಆಗಿರುತ್ತೇನೆ. ಪಕ್ಷಕ್ಕೆ ಧನ್ಯವಾದ ಹೇಳುತ್ತೇನೆ ಎಂದರು. ಇದನ್ನೂ ಓದಿ: ವಕ್ಫ್ ಆಸ್ತಿ ಯತ್ನಾಳ್ ತಂದೆಯ ಆಸ್ತಿಯೂ ಅಲ್ಲ: ಜಮೀರ್ ಅಹಮ್ಮದ್

 

3 ಡಿಸಿಎಂ ಹುದ್ದೆ ಸೃಷ್ಟಿ ಮಾಡಬೇಕು ಎಂಬ ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಹುದ್ದೆಗಳಿಗೆ ಪೈಪೋಟಿ ಇರುವುದು ಎಲ್ಲಾ ಪಕ್ಷಗಳಲ್ಲೂ ಇರುತ್ತದೆ. ಸ್ಥಾನಮಾನಗಳು ಬೇಕು ಅಂತ ಎಲ್ಲರೂ ಹೇಳುತ್ತಾರೆ. ಪಕ್ಷದ ಹೈಕಮಾಂಡ್,ರಾಜ್ಯ ನಾಯಕರು ನೋಡಿಕೊಳ್ತಾರೆ ಎಂದರು.

ಹೆಚ್ಚು ಡಿಸಿಎಂ ಹುದ್ದೆ ಅವಶ್ಯಕತೆ ಇದ್ಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಅವರವರಿಗೆ ಬಿಟ್ಟ ವಿಚಾರ. ನಾನೂ ಏನೂ ಹೇಳುವುದಿಲ್ಲ. ಅದರ ಬಗ್ಗೆ ಕಾಮೆಂಟ್ ಮಾಡುವುದಿಲ್ಲ. ಈ ವಿಚಾರವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ. ನನಗೂ ಇದಕ್ಕೂ ಸಂಬಂಧವಿಲ್ಲ ಎಂದರು

Share This Article