ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ (Kashmir) ಪೊಲೀಸರು ಕಾರ್ಯಾಚರಣೆ ನಡೆಸಿ ದಕ್ಷಿಣ ಕಾಶ್ಮೀರದ ಕುಲ್ಗಾಮ್ನಲ್ಲಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ (Hizb-ul-Mujahideen) ಭಯೋತ್ಪಾದಕರನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಂದು ಪಿಸ್ತೂಲ್ (Pistol), ಎರಡು ಮ್ಯಾಗ್ಜಿನ್ ಹಾಗೂ 13 ಸುತ್ತಿನ ಸಜೀವ ಗುಂಡುಗಳನ್ನು ವಶಕ್ಕೆ ಪಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: `ಸಾಕಪ್ಪ ಸಾಕು, ಕಿವಿ ಮೇಲೆ ಹೂ’; ಬಜೆಟ್ ಬಗ್ಗೆ ಕಾಂಗ್ರೆಸ್ ವ್ಯಂಗ್ಯ – ಪೋಸ್ಟರ್ ಅಂಟಿಸಿ ಅಭಿಯಾನ
ಅಕ್ರಮ ಶಸ್ತ್ರಾಸ್ತ್ರ ಸಾಗಿಸುತ್ತಿರುವ ನಿರ್ದಿಷ್ಟ ಮಾಹಿತಿ ಮೇರೆಗೆ ಹತಿಪೋರ್, ಬೆಹಿಬಾಗ್ ಮತ್ತು ಕುಲ್ಗಾಮ್ ಠಾಣೆಯ ಪೊಲೀಸರು ಕಾರ್ಯಾಚರಣೆ ಕೈಗೊಂಡು, ದಾದರ್ಕೊಟ್ನ ಅಲಂಗಂಜ್ ಕ್ರಾಸಿಂಗ್ನಲ್ಲಿ ಚೆಕ್ಪೋಸ್ಟ್ ನಿರ್ಮಿಸಿ ಕಾದಿದ್ದರು.
ಪ್ರಾಥಮಿಕ ತನಿಖೆಯಿಂದ ಆರೋಪಿಗಳು ಭಯೋತ್ಪಾದಕ ಸಂಘಟನೆಯೊಂದಿಗೆ ಕೈಜೋಡಿಸಿ ಉಗ್ರ ಚಟುವಟಿಕೆಗಳಲ್ಲಿ ಭಾಗವಹಿಸಿರುವುದು ತಿಳಿದು ಬಂದಿದೆ. ಈ ಬಗ್ಗೆ ಎಫ್ಐಆರ್ ದಾಖಲಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಕೊನೆ ಉಸಿರೆಳೆಯುತ್ತಿರುವ ಬಿಜೆಪಿ ಸರ್ಕಾರಕ್ಕೆ ಟಿಪ್ಪು, ಭಯೋತ್ಪಾದನೆ, ಎಸ್ಡಿಪಿಐ ಆಕ್ಸಿಜನ್ ಆಗ್ತಿದೆ: ಯುಟಿ ಖಾದರ್LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k