ಮಡಿಕೇರಿಯಲ್ಲಿ ಗುಡ್ಡ ಕುಸಿದು ಮೂವರು ಕೂಲಿ ಕಾರ್ಮಿಕರ ದುರ್ಮರಣ

By
2 Min Read

ಮಡಿಕೇರಿ: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ಸಂದರ್ಭ ಗುಡ್ಡ ಕುಸಿದ (Hill Collapse) ಪರಿಣಾಮ ಮೂವರು ಕೂಲಿ ಕಾರ್ಮಿಕರು (Labourers) ಮಣ್ಣಿನಡಿ ಸಿಲುಕಿ ಮೃತಪಟ್ಟಿರುವ ಘಟನೆ ಮಡಿಕೇರಿ (Madikeri) ನಗರದ ಸ್ಟೀವರ್ಟ್ ಹಿಲ್ ಬಡಾವಣೆಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಿವಾಸಿಗಳಾದ ಬಸಪ್ಪ, ನಿಂಗಪ್ಪ ಹಾಗೂ ಆನಂದ ಮೃತ ದುರ್ದೈವಿಗಳು. ವ್ಯಕ್ತಿಯೊಬ್ಬರ ಜಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಮಣ್ಣು ತೆಗೆಯುತ್ತಿದ್ದ ಸಂದರ್ಭ ಗುಡ್ಡ ಕುಸಿದಿದೆ. ಈ ಘಟನೆಯಿಂದ ಐವರು ಕೆಲಸ ಮಾಡುವ ಸಂದರ್ಭ ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು. ಅದೃಷ್ಟವಶಾತ್ ಕಾರ್ಮಿಕ ರಾಜು ಇತರ ಕಾರ್ಮಿಕರ ಸಹಕಾರದಿಂದ ಮೇಲೆ ಬಂದು ಜೀವ ಉಳಿಸಿಕೊಂಡಿದ್ದಾರೆ. ಉಳಿದ ಮೂವರು ಮಣ್ಣಿನಡಿ ಸಿಲುಕಿಕೊಂಡ ಪರಿಣಾಮ ಮೇಲೆ ಬರಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ.

ದುರ್ಘಟನೆ ವೇಳೆ ಸುಮಾರು 8 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದರು. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಘಟನಾ ಸ್ಥಳಕ್ಕೆ ಕೊಡಗು ಎಸ್‌ಪಿ ರಾಮರಾಜನ್, ಮಡಿಕೇರಿ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜು ಸ್ಥಳ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಪಬ್ಲಿಕ್‌ ಹೀರೋ ಬಾದಾಮಿಯ ಶಿವ ರೆಡ್ಡಿ ವಾಸನ್‌ಗೆ ರಾಜ್ಯೋತ್ಸವ ಪ್ರಶಸ್ತಿ

ಬಳಿಕ ಮಾತಾನಾಡಿದ ಎಸ್‌ಪಿ ರಾಮರಾಜನ್, ಇಂದು 15 ಅಡ್ಡಿ ಎತ್ತರದ ತಡೆಗೋಡೆ ಕಾಮಗಾರಿ ಮಾಡುವ ಸಂದರ್ಭದಲ್ಲಿ ಗುಡ್ಡ ಕುಸಿದು, ಕಾರ್ಮಿಕರ ಮೇಲೆ ಬಿದ್ದಿದೆ. ಅದರಲ್ಲಿ 4 ಜನರ ಮೇಲೆ ಮಣ್ಣು ಬಿದ್ದಿದೆ. ಒಬ್ಬರನ್ನು ಅಲ್ಲಿನ ಸಿಬ್ಬಂದಿಯೇ ರಕ್ಷಣೆ ಮಾಡಿದ್ದಾರೆ. ಉಳಿದ ಮೂವರು 1 ಗಂಟೆ ಕಾಲ ಮಣ್ಣಿನಡಿ ಸಿಲುಕಿದ್ದರು. ಅವರನ್ನು ರಕ್ಷಿಸಲು ಎಲ್ಲರೂ ನಿರಂತರವಾಗಿ ಶ್ರಮಿಸಿದರು ಎಂದು ಹೇಳಿದರು.

ಈ ಘಟನೆಗೆ ಇಲ್ಲಿ ಮೊದಲೇ ಸಡಿಲವಾಗಿ ಮಣ್ಣ ಹಾಕಿದ್ದರು ಎನ್ನಲಾಗಿದೆ. ನೋಡುವುದಕ್ಕೆ ಯಾರಿಗೂ ತಿಳಿಯುವುದಿಲ್ಲ. ಈ ಕಾಮಗಾರಿ ಮಾಡಲು ಪರ್ಮಿಷನ್ ತೆಗೆದುಕೊಂಡಿದ್ದಾರೋ ಇಲ್ಲವೋ ಅನ್ನೊಂದು ಇನ್ನಷ್ಟೇ ಮಾಹಿತಿ ಕಲೆ ಹಾಕಬೇಕಿದೆ. ಇದು ಮನೆಯ ಮಾಲೀಕನ ನಿರ್ಲಕ್ಷ್ಯದಿಂದ ಆಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅವರ ಮೇಲೆ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಖ್ಯಮಂತ್ರಿ ಸೀಟ್ ಖಾಲಿ ಇಲ್ಲ, ಇನ್ನು 5 ವರ್ಷ ಸಿದ್ದರಾಮಯ್ಯನೇ ಸಿಎಂ: ಜಮೀರ್

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್