ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌ – ಮೂವರು ನಕ್ಸಲರು ಬಲಿ

Public TV
1 Min Read

ರಾಯ್ಪುರ್: ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (Encounter) ಮೂವರು ಮಾವೋವಾದಿಗಳು (Maoists) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯ ತಂಡ ಮಾವೋವಾದಿ ವಿರೋಧಿ ಕಾರ್ಯಾಚರಣೆ ನಡೆಸಿದೆ. ಈ ವೇಳೆ ಗುಂಡಿನ ಚಕಮಕಿ ನಡೆದಿದೆ ಎಂದು ಬಸ್ತಾರ್ ವಲಯದ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಿ ತಿಳಿಸಿದ್ದಾರೆ.

ಗುಂಡಿನ ಚಕಮಕಿ ನಿಂತ ನಂತರ ಮೂವರು ಮಾವೋವಾದಿಗಳ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಸ್ಥಳದಲ್ಲಿ, ಸ್ವಯಂಚಾಲಿತ ಬಂದೂಕುಗಳು ಮತ್ತು ಸ್ಫೋಟಕಗಳು ಪತ್ತೆಯಾಗಿವೆ. ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರ್ಷ ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 12 ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ. ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ಮಾವೋವಾದಿಗಳನ್ನು ಹತ್ಯೆಗೈಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವರ್ಷ ಜ.6 ರಂದು, ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿಗಳು ಐಇಡಿ ಸ್ಫೋಟಿಸಿದ್ದರು. ಈ ಘಟನೆಯಲ್ಲಿ 8 ಪೊಲೀಸ್ ಸಿಬ್ಬಂದಿ ಮತ್ತು ಓರ್ವ ಚಾಲಕ ಸಾವನ್ನಪ್ಪಿದ್ದರು.

Share This Article