ಮುಂಬೈ: ಅರಬ್ಬಿ ಸಮುದ್ರದಲ್ಲಿ (Arabian Sea) ಮೀನುಗಾರರನ್ನು (Fisherman) ಹೊತ್ತೊಯ್ಯುತ್ತಿದ್ದ ದೋಣಿಯೊಂದು ಮುಳುಗಿ (Boat Capsized) ಮೂವರು ನಾಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ (Maharashtra) ರಾಯಗಢ (Raigad) ಜಿಲ್ಲೆಯಲ್ಲಿ ನಡೆದಿದೆ.
ದೋಣಿ ಖಾಂಡೇರಿಯಿಂದ ಅಲಿಬಾಗ್ ಬಳಿಯ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ. ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನದಿಂದಾಗಿ ದೋಣಿ ಮಗುಚಿದೆ. ಕೂಡಲೇ ಎಚ್ಚೆತ್ತ ಮೀನುಗಾರರು ನೀರಿಗೆ ಹಾರಿದ್ದಾರೆ. 8 ಮಂದಿ ಮೀನುಗಾರರ ಪೈಕಿ 5 ಮಂದಿ ಈಜಿಕೊಂಡು ದಡ ಸೇರಿದ್ದಾರೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಳೆಯಬ್ಬರ – ಪಾಯ ಕುಸಿದು ಪಕ್ಕಕ್ಕೆ ವಾಲಿದ 4 ಅಂತಸ್ತಿನ ಕಟ್ಟಡ
ನಾಪತ್ತೆಯಾದವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ನಾಪತ್ತೆಯಾಗಿರುವ ಮೂವರು ಮೀನುಗಾರರನ್ನು ಪತ್ತೆಹಚ್ಚಲು ಪೊಲೀಸರು ಮತ್ತು ಸ್ಥಳೀಯ ವಿಪತ್ತು ನಿರ್ವಹಣಾ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಜೊತೆಗೆ ಡ್ರೋನ್‌ಗಳನ್ನು ಸಹ ನಿಯೋಜಿಸಲಾಗಿದೆ. ಇನ್ನು ಈಜಿ ದಡ ಸೇರಿದ ಐವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್‌ನಂತೆಯೇ ಥಾಯ್ಲೆಂಡ್-ಕಾಂಬೋಡಿಯಾ ಯುದ್ಧ ನಿಲ್ಲಿಸಿದ್ದು ನಾನೇ: ಟ್ರಂಪ್