ಮಣಿಪುರ ಹಿಂಸಾಚಾರದಲ್ಲಿ ಮತ್ತೆ ಮೂವರ ಸಾವು

Public TV
1 Min Read

ಇಂಫಾಲ: ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ (Manipur Violence) ವರದಿಯಾಗಿದ್ದು, ಘಟನೆಯಲ್ಲಿ ಭಾನುವಾರ ಮೂವರು ಸಾವನ್ನಪ್ಪಿದ್ದಾರೆ.

ಮಣಿಪುರದ ಬಿಷ್ಣುಪುರ್ (Bishnupur) ಜಿಲ್ಲೆಯ ಖೋಯ್ಜುಮಂತಬಿ ಗ್ರಾಮದಲ್ಲಿ ಹಿಂಸಾಚಾರ ವರದಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಕೂಡಾ ಗ್ರಾಮದಲ್ಲಿ ಸ್ವಯಂಸೇವಕರಾಗಿದ್ದು, ತಾತ್ಕಾಲಿಕ ಬಂಕರ್ ಪ್ರದೇಶವನ್ನು ಕಾಪಾಡುತ್ತಿದ್ದರು ಎನ್ನಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

ಶನಿವಾರ ರಾತ್ರಿ ನಡೆದಿರುವ ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರ ಪೈಕಿ ಗಾಯಗೊಂಡಿರುವ ದಂಪತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಇಂಫಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ನಡುವೆ ಕುಕಿ (Kuki) ಸಮುದಾಯದ ಸಂಘಟನೆಗಳಾದ ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಹಾಗೂ ಕುಕಿ ನ್ಯಾಷನಲ್ ಆರ್ಗನೈಸೇಶನ್ 2 ತಿಂಗಳ ಬಳಿಕ ಮಣಿಪುರದ ಕಾಂಗ್ ಪೊಕ್ಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 2 ರಲ್ಲಿ ರಸ್ತೆ ತಡೆಯನ್ನು ಹಿಂತೆಗೆದುಕೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನವಿ ಮೇರೆಗೆ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿಗಾಗಿ ಮಿಟೈ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಬುಡಕಟ್ಟು ಐಕ್ಯತಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಆದರೆ ಇದಾದ ಬಳಿಕ ಹಿಂಸಾಚಾರ ಭುಗಿಲೆದ್ದು, ಮಣಿಪುರದಾದ್ಯಂತ ಜನಾಂಗೀಯ ಘರ್ಷಣೆ ಉಂಟಾಯಿತು. ಇದನ್ನೂ ಓದಿ: KRS ನಲ್ಲಿ ನೀರಿನ ಕೊರತೆ – ಕುಡಿಯುವ ನೀರಿಗೆ ಶುರುವಾಯ್ತು ಆತಂಕ!

ಹಿಂಸಾಚಾರದ ಬಳಿಕ ಮಣಿಪುರದ 8 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಯಿತು ಹಾಗೂ ಇಡೀ ರಾಜ್ಯದಲ್ಲಿ ಹಲವು ದಿನಗಳ ವರೆಗೆ ಮೊಬೈಲ್ ಇಂಟರ್‌ನೆಟ್ ಅನ್ನು ಸ್ಥಗಿತಗೊಳಿಸಲಾಯಿತು. ಕಳೆದ 2 ತಿಂಗಳಿನಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನೂರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಹಿಳಾ ಶಕ್ತಿಗೆ ಜಗ್ಗಲಿಲ್ಲ- ಫ್ರೀ ಬಸ್‍ನಲ್ಲಿ ಪುರುಷ ಪ್ರಯಾಣಿಕರ ಸಂಖ್ಯೆ 13 ಲಕ್ಷಕ್ಕೆ ಏರಿಕೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್