ಉಡುಪಿ: ಅಂಬುಲೆನ್ಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಸ್ಥಳದಲ್ಲಿಯೇ ಮೂರು ಮಂದಿ ಮೃತಪಟ್ಟಿದ್ದು, ಓರ್ವ ಮಹಿಳೆ ಗಂಭೀರವಾಗಿ ಗಾಯವಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿಯ ಕೋಟ ಮಣೂರು ಎಂಬಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರೆಲ್ಲರೂ ಉತ್ತರಕನ್ನಡ ಮೂಲದವರು ಎಂದು ಗುರುತಿಸಲಾಗಿದೆ. ಈ ಅಪಘಾತದಲ್ಲಿ ಇಬ್ಬರು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ.
ಉಲ್ಲಾಸ್ ತಳೇಕರ್ ಎಂಬವರಿಗೆ ಜಾಂಡೀಸ್ ಆಗಿತ್ತು. ಉಲ್ಲಾಸ್ ಜೊತೆ ಕುಟುಂಬಸ್ಥರು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಬರುತ್ತಿದ್ದರು. ಈ ವೇಳೆ ಉಡುಪಿಯ ಕೋಟ ಮಣೂರು ಬಳಿ ಲಾರಿ ಮತ್ತು ಅಂಬುಲೆನ್ಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಸಾಧನಾ ಉಲ್ಲಾಸ್ ತಳೇಕರ್ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ರವಾನಿಸಲಾಗಿದೆ. ಮೂರು ಮೃತದೇಹಗಳನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮೂವರು ಮೃತರ ಹೆಸರುಗಳು ಇನ್ನು ಪತ್ತೆಯಾಗಿಲ್ಲ. ಮೃತರ ಮತ್ತು ಗಾಯಾಳುಗಳ ಸಂಬಂಧಿಕರು ಕುಂದಾಪುರ ಸರಕಾರಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ.
ಘಟನಾ ಸ್ಥಳಕ್ಕೆ ಕೋಟ್ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv