ಕಲುಷಿತ ನೀರು ಸೇವಿಸಿ ಮೂವರು ಸಾವು, 20ಕ್ಕೂ ಅಧಿಕ ಜನ ಅಸ್ವಸ್ಥ

Public TV
1 Min Read

ಚೆನ್ನೈ: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿರುವ ಘಟನೆ ಚೆನ್ನೈ (Chennai) ಸಮೀಪದ ಪಲ್ಲಾವರಂ (Pallavaram) ಎಂಬಲ್ಲಿ ನಡೆದಿದೆ.

ಮೃತರನ್ನು ತಿರುವೀತಿ (56), ಮೋಹನರಂಗಂ (42), ವರಲಕ್ಷ್ಮಿ (88) ಎಂದು ಗುರುತಿಸಲಾಗಿದ್ದು, 20 ಜನ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರನ್ನು ಕ್ರೋಮ್‌ಪೇಟೆ ಸರ್ಕಾರಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಕೆಲವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಇಂದು ದೆಹಲಿ-ಹರಿಯಾಣ ಗಡಿಯಲ್ಲಿ ರೈತರ ಪ್ರತಿಭಟನೆ; ಶಂಭು ಗಡಿಯಲ್ಲಿ ರೈತರು ಜಮಾವಣೆ

ಫೆಂಗಲ್ ಚಂಡಮಾರುತದಿಂದಾಗಿ ಪಲ್ಲಾವರಂನಲ್ಲಿ ಇತ್ತೀಚಿಗೆ ಸುರಿದ ಮಳೆಯ ಪರಿಣಾಮ ಕೊಳಚೆ ನೀರು ಮತ್ತು ಕುಡಿಯುವ ನೀರು ಮಿಶ್ರಣವಾಗಿ ಕಲುಷಿತಗೊಂಡಿದೆ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ತಮಿಳುನಾಡು ಆರೋಗ್ಯ ಸಚಿವ ಮಾ.ಸುಬ್ರಮಣಿಯನ್ (Ma.Subramanian) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೀರಿನ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿಗೆ ನಿಖರವಾದ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.

ವೈದ್ಯರ ಮಾಹಿತಿಯ ಆಧಾರದ ಮೇಲೆ, ಪಲ್ಲಾವರಂನ ಕಾಮರಾಜ್‌ನಗರ ಹಾಗೂ ಮನಲ್ಮೇಡು ನಿವಾಸಿಗಳು ಕಳೆದ ಮೂರು ದಿನಗಳಿಂದ ವಾಂತಿ ಹಾಗೂ ಭೇದಿ ಲಕ್ಷಣಗಳೊಂದಿಗೆ ಸರ್ಕಾರಿ ಆಸ್ಪತ್ರೆಗೆ ಬರುತ್ತಿದ್ದಾರೆ. ಇಲ್ಲಿಯವರೆಗೂ ಒಟ್ಟು 34 ಚಿಕಿತ್ಸೆ ಪಡೆದಿದ್ದು, 14 ಮಂದಿ ಬಿಡುಗಡೆಯಾಗಿದ್ದಾರೆ. 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.ಇದನ್ನೂ ಓದಿ: EXCLUSIVE: ಮುಡಾ ಕೇಸ್; 13 ವರ್ಷದಲ್ಲಿ 4,921 ಕ್ಕೂ ಹೆಚ್ಚು ಸೈಟ್‌ಗಳ ಅಕ್ರಮ ಹಂಚಿಕೆ

Share This Article