ಬೈರತಿ ಬಸವರಾಜ್ ಬಂಧನಕ್ಕಾಗಿ 3 ವಿಶೇಷ ತಂಡ; ಪುಣೆಯಲ್ಲಿ ತಲೆ ಮರೆಸಿಕೊಂಡಿರೋ ಮಾಹಿತಿ ಲಭ್ಯ

1 Min Read

ಬೆಂಗಳೂರು: ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್‌ (Byrati Basavaraj) ತನ್ನ ಮೊಬೈಲ್ ಸ್ವಿಚ್ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಆದ್ರೆ ಕೊನೆದ್ದಾಗಿ ಅವರ ಲೈವ್‌ ಲೊಕೆಷನ್‌ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.

ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ (Belagavi Winter Session) ಬೈರತಿ ಬಸವರಾಜ್, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಅನ್ನೋದು ಸೇರಿದಂತೆ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಕ್ಕೆ ಕನೆಕ್ಟ್ ಆಗುವ ಟೋಲ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಕಾರ – ಬೈರತಿ ಬಸವರಾಜ್‌ಗೆ ಬಂಧನ ಭೀತಿ

Byrati Basavaraj a

ಈ ವೇಳೆ ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಸಿಕ್ಕಿತ್ತು. ತನಿಖೆ ಮುಂದುವರೆಸಿದ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಲೊಕೆಷನ್‌ ಕೊನೆಯದ್ದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆ ಯಾಗಿದ್ದು ಅಲ್ಲಿಂದ ಮೊಬೈಲ್ ಆಫ್‌ ಮಾಡ್ಕೊಂಡು ನಾಪತ್ತೆಯಾಗಿದ್ದಾರೆ ಅನ್ನೋದು ಗೊತ್ತಾಗಿದೆ. ಇದನ್ನೂ ಓದಿ: ಕಾಫಿಪೋಸಾ ಆದೇಶ ಪ್ರಶ್ನಿಸಿದ್ದ ರನ್ಯಾಗೆ ಮತ್ತೆ ಶಾಕ್ – ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಿಕ್ಲು ಶಿವಪ್ರಕಾಶ್ ಕೊಲೆ ಆರೋಪಿಗಳು ನಂಗೆ ಪರಿಚಯನೇ ಇಲ್ಲ ಅಂದಿದ್ದ ಬೈರತಿ ಬಸವರಾಜ್‌ಗೆ ಈಗ ಸಂಕಷ್ಟ ಎದುರಾಗಿದೆ. ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಆರೋಪಿಗಳ ಜೊತೆಗೆ ಬೈರತಿ ಬಸವರಾಜ್ ಸಂಪರ್ಕದಲ್ಲಿ ಇರೋದು ಪತ್ತೆಯಾಗಿದ್ದು, ಪೊಲೀಸರಿಗೆ ಸುಳ್ಳು ಮಾಹಿತಿ ನೀಡಿರೋದು ಗೊತ್ತಾಗಿದೆ. ಹಾಗಾಗಿ ಯಾವುದೇ ಕ್ಷಣದಲ್ಲೂ ಮಾಜಿ ಸಚಿವ ಬೈರತಿ ಬಸವರಾಜ್ ಬಂಧನವಾಗುವ ಸಾಧ್ಯತೆ ಇದೆ.

Share This Article