ವಿಷಕಾರಿ ಹಾವು ಕಡಿದು ಮೂವರು ವಿದ್ಯಾರ್ಥಿಗಳ ಸಾವು

Public TV
1 Min Read

ಭುವನೇಶ್ವರ್: ವಿಷಕಾರಿ ಹಾವು (Snake) ಕಚ್ಚಿ ಮೂವರು ವಿದ್ಯಾರ್ಥಿಗಳು (Students) ಸಾವನ್ನಪ್ಪಿದ ಘಟನೆ ಒಡಿಶಾದ (Odisha) ಕಿಯೋಂಜಾರ್‌ನ ಖಾಸಗಿ ಹಾಸ್ಟೆಲ್‍ನಲ್ಲಿ ನಡೆದಿದೆ. ಓರ್ವ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ನೀಡಲಾಗುತ್ತಿದೆ.

ರಾಜಾ ನಾಯಕ್ (12), ಶೆಹಶ್ರೀ ನಾಯಕ್ (11) ಮತ್ತು ಎಲಿನಾ ನಾಯಕ್ (12) ಮೃತಪಟ್ಟ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಆಕಾಶ್ ನಾಯಕ್ (12) ಎಂಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿಗಳು ಮಲಗಿದ್ದ ವೇಳೆ ಹಾವು ಕಚ್ಚಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಪತಿಯ ಮುಂದೆಯೇ ಸೋದರ ಸಂಬಂಧಿಯನ್ನು ವರಿಸಿದ ಪತ್ನಿ!

ವಿದ್ಯಾರ್ಥಿಗಳು ಖಾಸಗಿ ಕೋಚಿಂಗ್ ಸೆಂಟರ್‌ನ ಹಾಸ್ಟೆಲ್‍ನಲ್ಲಿ ತಂಗಿದ್ದರು. ನಾಲ್ವರು ವಿದ್ಯಾರ್ಥಿಗಳು ನೆಲದ ಮೇಲೆ ಮಲಗಿದ್ದಾಗ ಈ ಘಟನೆ ನಡೆದಿದೆ. ನಿದ್ರೆಯಲ್ಲಿದ್ದ ಕಾರಣ ವಿದ್ಯಾರ್ಥಿಗಳಿಗೆ ಹಾವು ಕಚ್ಚಿರುವುದು ಅರಿವಿಗೆ ಬಂದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ ಅವರ ಆರೋಗ್ಯದಲ್ಲಿ ಬದಲಾವಣೆಯಾಗಿದ್ದು, ಕೂಡಲೇ ನಾಲ್ವರು ವಿದ್ಯಾರ್ಥಿಗಳನ್ನು ಕಿಯೋಂಜಾರ್‍ನಲ್ಲಿರುವ ಜಿಲ್ಲಾ ಪ್ರಧಾನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬಳಿಕ ಗಂಭೀರ ಸ್ಥಿತಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿಯನ್ನು ಚಿಕಿತ್ಸೆಗಾಗಿ ಎಸ್‍ಸಿಬಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಆನ್‍ಲೈನ್ ಗೇಮ್‍ನಲ್ಲಿ 5 ಕೋಟಿ ಗೆದ್ದು, 58 ಕೋಟಿ ಕಳೆದುಕೊಂಡ ಉದ್ಯಮಿ!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್