ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

Public TV
1 Min Read

ಮೈಸೂರು: ಕಾವೇರಿ ಹಿನ್ನೀರಿನಲ್ಲಿ (Cauvery Backwater) ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಮೈಸೂರು (Mysuru) ತಾಲೂಕು ಮೀನಾಕ್ಷಿಪುರದ ಹಿನ್ನೀರಿನಲ್ಲಿ ನಡೆದಿದೆ.

ಪ್ರಶಾಂತ್, ಸಿದ್ದ, ಕೃಷ್ಣ ನೀರಿನಲ್ಲಿ ಮುಳುಗಿದ ವಿದ್ಯಾರ್ಥಿಗಳು. ಮಂಡ್ಯ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಮೀನಾಕ್ಷಿಪುರಕ್ಕೆ ಬಂದಿದ್ದ ವೇಳೆ ಘಟನೆ ಸಂಭವಿಸಿದೆ. ಇದನ್ನೂ ಓದಿ: ಡಿಕೆಶಿಗೆ ನಾನು ಅವಮಾನ ಮಾಡಿಲ್ಲ, ನಮ್ಮ ಸಂಬಂಧ ಕೆಡಿಸಲು ಬಿಜೆಪಿ ಕುತಂತ್ರ: ಸಿದ್ದರಾಮಯ್ಯ

ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಇಳವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಪ್ರಭು ಚೌಹಾಣ್ ಪುತ್ರ ಯುವತಿಗೆ ವಂಚನೆ ಆರೋಪ – ಇಬ್ಬರೂ ಒಂದೇ ರೂಮ್‌ನಲ್ಲಿದ್ದ ಬಗ್ಗೆ ಸಾಕ್ಷಿ ಬಿಡುಗಡೆ

Share This Article