ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

By
1 Min Read

ಹುಬ್ಬಳ್ಳಿ: ಕಾರೊಂದು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆತದ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ(Hubballi) ನೂಲ್ವಿ ಕ್ರಾಸ್‌ನಲ್ಲಿ ನಡೆದಿದೆ.

ವರೂರು(Varur) ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕ್ವಿಡ್ ಕಾರು ವೇಗವಾಗಿ ಬಂದು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಖಾಲಿ ಸೈಟಿನಲ್ಲಿ ಕಸ ಬೀಳುತ್ತೋ ಇಲ್ವೋ, ಬಿಬಿಎಂಪಿ ಸೆಸ್ ಮಾತ್ರ ಬೀಳುತ್ತೆ: ಆರ್. ಅಶೋಕ್

ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂಬ ಮಾಹಿತಿ ದೊರೆತಿದ್ದು, ಗಾಯಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

Share This Article