ಬೆಳ್ತಂಗಡಿ| ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

Public TV
1 Min Read

ಮಂಗಳೂರು: ಡ್ಯಾಂ ಒಂದರಲ್ಲಿ ಈಜಾಡಲು ಹೋಗಿ ಮೂವರು ಯುವಕರು (Youths) ನೀರುಪಾಲಾದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಎಂಬಲ್ಲಿ ನಡೆದಿದೆ.

ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾರ್ಯಕ್ರಮದ ನಿಮಿತ್ತ ಬಂದ ಮೂಡಬಿದ್ರೆ ತಾಲೂಕಿನ ಎಡಪದವು ನಿವಾಸಿ ಲಾರೆನ್ಸ್ (20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬವರು ಸಾವನ್ನಪ್ಪಿದ ದುರ್ದೈವಿಗಳು. ವಾಲ್ಟರ್‌ರವರ ಮನೆಯಲ್ಲಿ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ. ಇದನ್ನೂ ಓದಿ: ಭೋವಿ ನಿಗಮ ಹಗರಣ: ಡಿವೈಎಸ್ಪಿ ಹೆಸರು ಬರೆದಿಟ್ಟರೂ ಬಂಧನ ಮಾಡಿಲ್ಲ ಯಾಕೆ – ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ

ಈಜು ತಜ್ಞರು ಮೂವರು ಯುವಕರ ಮೃತದೇಹ ನೀರಿನಿಂದ ಹೊರತೆಗೆದಿದ್ದಾರೆ. ಮೃತರು ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ದಿಢೀರ್‌ ದೆಹಲಿಗೆ ಸಿಎಂ – ಸಿದ್ದರಾಮಯ್ಯ ಸಂಪುಟಕ್ಕೆ ಶೀಘ್ರವೇ ಸರ್ಜರಿ?

Share This Article