5 ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

Public TV
1 Min Read

ಚಾಮರಾಜನಗರ: ಇಲ್ಲಿನ ಮಲೆಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವಿನ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಮರಣೋತ್ತರ ಪರೀಕ್ಷೆಯಲ್ಲಿ ದೃಢವಾಗಿದೆ. ಈ ಬೆನ್ನಲ್ಲೇ ಬಂಡೀಪುರ ಗುಂಡ್ರೆ ಅರಣ್ಯ ವ್ಯಾಪ್ತಿಯಲ್ಲಿ ಮತ್ತೊಂದು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ದಾರುಣ ಸಾವು – ಸ್ಫೋಟಕ ರಹಸ್ಯ ಬಿಚ್ಚಿಟ್ಟ ಆ ಪತ್ರ

4 ರಿಂದ 5 ವರ್ಷ ವಯಸ್ಸಿನ ಹೆಣ್ಣು ಹುಲಿ ಸಾವನ್ನಪ್ಪಿದ್ದು, ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಕಳೇಬರ ಪತ್ತೆಯಾಗಿದೆ. ಮೇಲ್ನೋಟಕ್ಕೆ ಸಹಜ ಸಾವಿನಂತೆ ಕಂಡುಬಂದಿದೆ. ಶನಿವಾರ ಮರಣೋತ್ತರ ಪರೀಕ್ಷೆ ನಡೆಯಲಿದೆ. ಇದನ್ನೂ ಓದಿ: 5 ಹುಲಿಗಳ ನಿಗೂಢ ಸಾವು – ವಿಷ ಹಾಕಿದ್ದ ದುಷ್ಕರ್ಮಿ ಸೇರಿ ಐವರು ವಶಕ್ಕೆ

Share This Article