ಮಾಸ್ ಮಹಾರಾಜ ರವಿತೇಜ ಜೊತೆ ಹೆಜ್ಜೆ ಹಾಕಿದ ನೂಪುರ್ ಸನೋನ್

Public TV
1 Min Read

ತೆಲುಗಿನ ಮಾಸ್ ಮಹಾರಾಜ ರವಿತೇಜ (Ravi Teja) ನಟನೆಯ ಬಹುನಿರೀಕ್ಷಿತ ಟೈಗರ್ ನಾಗೇಶ್ವರ್ ರಾವ್ (Tiger Nageshwara Rao) ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. 5 ಭಾಷೆಯಲ್ಲಿ ಈ ಸಿನಿಮಾದ ಹಾಡು ಅನಾವರಣಗೊಂಡಿದೆ. ಕನ್ನಡದಲ್ಲಿ ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಹಾಡಿಗೆ ಧ್ವನಿಯಾಗಿದ್ದಾರೆ. ರವಿತೇಜ- ನೂಪುರ್ ಸನೋನ್ (Nupur Sanon)ಏಕ್ ದಮ್ ಏಕ್ ದಮ್ ಪೆಪ್ಪಿಯೆಸ್ಟ್ ಸಾಂಗ್‌ಗೆ ಹೆಜ್ಜೆ ಹಾಕಿದ್ದು, ಜಿವಿ ಪ್ರಕಾಶ್ ಟ್ಯೂನ್ ಹಾಕಿದ್ದಾರೆ.

70ರ ಕಾಲಘಟ್ಟದ ಹೈದ್ರಾಬಾದ್‌ನ ಬಳಿ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದೆ. ಈ ಚಿತ್ರಕ್ಕಾಗಿ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಬದಲಿಸಿಕೊಂಡಿದ್ದಾರೆ.

ನೂಪುರ್ ಸನೋನ್- ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ. ಇದನ್ನೂ ಓದಿ:ಸೆನ್ಸಾರ್ ಪಾಸಾದ ‘ಲೈನ್ ಮ್ಯಾನ್’ಗೆ ಸಿಕ್ತು ಯು ಸರ್ಟಿಫಿಕೇಟ್

‘ಟೈಗರ್ ನಾಗೇಶ್ವರ್ ರಾವ್’ ಅಕ್ಟೋಬರ್ 20ರಂದು ರಿಲೀಸ್ ಆಗಲಿದೆ. ದಸರಾ ಹಬ್ಬದ ಸಂದರ್ಭ, ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರಿಲೀಸ್ ಮಾಡಲಾಗ್ತಿದೆ. ಕಾರ್ತಿಕೇಯ-2, ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಿಸಿರುವ ಅಭಿಷೇಕ್ ಅಗರ್ವಾಲ್ ತಮ್ಮದೇ ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಬ್ಯಾನರ್ ನಡಿ ಟೈಗರ್ ನಾಗೇಶ್ವರ್ ರಾವ್ ಚಿತ್ರ ನಿರ್ಮಿಸಿದ್ದಾರೆ. ವಂಶಿ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್