ಕೆಆರ್‌ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹದೇವಪ್ಪ

Public TV
1 Min Read

ಮಂಡ್ಯ: ಕೆಆರ್‌ಎಸ್ ಡ್ಯಾಂಗೆ (KRS Dam) ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ (Tipu Sultan) ಎಂದು ಸಚಿವ ಹೆಚ್.ಸಿ.ಮಹದೇವಪ್ಪ (H.C.Mahadevappa) ಹೇಳಿಕೆ ನೀಡಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ ಅವರು, ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ರು. ಆದರೆ, ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆಆರ್‌ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು ಎಂದು ತಿಳಿಸಿದರು. ಇದನ್ನೂ ಓದಿ: ನಾನು 1980 ರಲ್ಲೇ ಸಿಎಂ ಆಗಬೇಕಿತ್ತು, ಸಿಗದ್ದಕ್ಕೆ ನಾನು ಪಶ್ಚಾತ್ತಾಪ ಪಡಲಿಲ್ಲ: ಮೊಯ್ಲಿ

ಚರಿತ್ರೆ ಗೊತ್ತಿಲ್ಲದವರು ಚರಿತ್ರೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಟಿಪ್ಪು ಮಸೀದಿ ಇದೆ, ಪಕ್ಕದಲ್ಲಿ ದೇವಸ್ಥಾನ ಇದೆ. ಈಕಡೆ ಅಲ್ಲವೋ ಅಕ್ಬರ್ ಅಂತಾರೆ, ಆಕಡೆ ಗಂಟೆ ಟಣ್, ಟಣ್ ಅನ್ನುತ್ತೆ. ಎರಡನ್ನು ಕೇಳ್ತಿದ್ರು ಅವರು. ಸಮಚಿತ್ತರಾಗಿದ್ದವರು ಟಿಪ್ಪು ಎಂದು ಸಚಿವರು ಬಣ್ಣಿಸಿದರು.

ದೇವದಾಸಿ ಪದ್ಧತಿಯನ್ನು ಟಿಪ್ಪು ರದ್ದು ಮಾಡಿದ್ರು. ಶೋಷಿತ ಮಹಿಳೆಯರನ್ನು ದೇವದಾಸಿ ಪದ್ಧತಿಗೆ ದೂಡಲಾಗುತ್ತಿತ್ತು. ಆ ಕಾಲದಲ್ಲೇ ದೇವದಾಸಿ ಪದ್ಧತಿ ರದ್ದು ಮಾಡಿದ್ದು ಟಿಪ್ಪು. ಟಿಪ್ಪು ಅವರ ಕಾಲದಲ್ಲಿ ಒಂದೇ ಒಂದು ಇಂಚು ಭೂಮಿಯನ್ನು ಉಳ್ಳವರಿಗೆ ಕೊಟ್ಟಿರಲಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಾರಿಗೆ ನೌಕರರ ವೇತನ ಪರಿಷ್ಕರಣೆಯಾಗದೇ ಇರಲು ಬಿಜೆಪಿ ಕಾರಣವಂತೆ: ಏನಿದು ಆದೇಶ ಗೊಂದಲ?

ಭಾರತ ದೇಶಕ್ಕೆ ಸಿರಿಕಲ್ಚರ್ ರೇಷ್ಮೆ ತಂದಿದ್ದೆ ಟಿಪ್ಪು ಸುಲ್ತಾನ್. ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವತಂತ್ರ ಸೇನಾನಿ. ಮೈಸೂರಿನ ಅರಮನೆ ಇದ್ದಿದ್ದು ಶ್ರೀರಂಗಪಟ್ಟಣದಲ್ಲೇ ಎಂದರು.

ಮೈಸೂರು ರಾಜರ್ಷಿ ನಾಲ್ವಡಿ ಒಡೆಯರ್ ಪುಣ್ಯಸ್ಮರಣೆ ದಿನದಂದೇ ಸಚಿವರು ಈ ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: 77ನೇ ವಸಂತಕ್ಕೆ ಕಾಲಿಟ್ಟ ಸಿದ್ದರಾಮಯ್ಯಗೆ ಕನ್ನಡದಲ್ಲೇ ಶುಭ ಹಾರೈಸಿದ ತಮಿಳುನಾಡು ಸಿಎಂ

Share This Article