MUDA Case| ಪತ್ನಿ ನಿರ್ಧಾರ ಆಶ್ಚರ್ಯ ತಂದಿದೆ: ಸಿದ್ದರಾಮಯ್ಯ

Public TV
1 Min Read

ಬೆಂಗಳೂರು: ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

14 ಸೈಟ್‌ಗಳನ್ನು ಪಾರ್ವತಿ (Parvathi) ಅವರು ಮರಳಿ ಮುಡಾಕ್ಕೆ (MUDA Case) ನೀಡಿದ ಬಗ್ಗೆ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ದ್ವೇಷ ರಾಜಕಾರಣ, ಸತ್ಯಮೇವ ಜಯತೆ ಎಂದು ಹ್ಯಾಶ್‌ ಟ್ಯಾಗ್‌ ಬಳಸಿ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮುಡಾ ಸೈಟ್‌ ವಾಪಸ್‌ಗೆ ಸಿಎಂ ಪತ್ನಿ ನಿರ್ಧಾರ – ಕಾನೂನು ಹೋರಾಟದ ಪರಿಣಾಮ ಏನು?

 

ಸಿಎಂ ಪೋಸ್ಟ್‌ನಲ್ಲಿ ಏನಿದೆ?
ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ ಜಮೀನಿಗೆ ಪರಿಹಾರ ರೂಪದಲ್ಲಿ ನೀಡಿದ್ದ ನಿವೇಶನಗಳನ್ನು ನನ್ನ ಪತ್ನಿ ಪಾರ್ವತಿ ಹಿಂದಿರುಗಿಸಿದ್ದಾರೆ.

ನನ್ನ ವಿರುದ್ದ ರಾಜಕೀಯ ದ್ವೇಷ ಸಾಧನೆಗಾಗಿ ವಿರೋಧ ಪಕ್ಷಗಳು ಸುಳ್ಳು ದೂರನ್ನು ಸೃಷ್ಟಿಸಿ ನನ್ನ ಕುಟುಂಬವನ್ನು ವಿವಾದಕ್ಕೆ ಎಳೆದು ತಂದಿರುವುದು ರಾಜ್ಯದ ಜನತೆಗೂ ತಿಳಿದಿದೆ.

ಈ ಅನ್ಯಾಯಕ್ಕೆ ತಲೆಬಾಗದೆ ಹೋರಾಟ ಮಾಡಬೇಕೆಂಬುದು ನನ್ನ ನಿಲುವಾಗಿತ್ತು. ಆದರೆ ನನ್ನ ವಿರುದ್ಧ ನಡೆಯುತ್ತಿರುವ ರಾಜಕೀಯ ಷಡ್ಯಂತ್ರದಿಂದ ನೊಂದಿರುವ ನನ್ನ ಪತ್ನಿ ಈ ನಿವೇಶನಗಳನ್ನು ಹಿಂದಿರುಗಿಸುವ ನಿರ್ಧಾರ ಕೈಗೊಂಡು, ನನಗೂ ಆಶ್ಚರ್ಯ ಉಂಟು ಮಾಡಿದ್ದಾರೆ.

 

ನನ್ನ ನಾಲ್ಕು ದಶಕಗಳ ಸುದೀರ್ಘ ರಾಜಕಾರಣದಲ್ಲಿ ಎಂದೂ ಕೂಡಾ ಮಧ್ಯೆಪ್ರವೇಶಿಸದೆ ಕುಟುಂಬಕ್ಕಷ್ಟೆ ಸೀಮಿತವಾಗಿದ್ದ ನನ್ನ ಪತ್ನಿ ನನ್ನ ವಿರುದ್ಧದ ದ್ವೇಷದ ರಾಜಕಾರಣಕ್ಕೆ ಬಲಿಯಾಗಿ ಮಾನಸಿಕವಾಗಿ ಹಿಂಸೆ ಅನುಭವಿಸುವಂತಾಗಿರುವುದಕ್ಕೆ ನನಗೆ ವಿಷಾದ ಇದೆ. ಹೀಗಿದ್ದರೂ ನಿವೇಶನಗಳನ್ನು ಹಿಂದಿರುಗಿಸಿದ ನನ್ನ ಪತ್ನಿಯ ನಿರ್ಧಾರವನ್ನು ನಾನು ಗೌರವಿಸುತ್ತೇನೆ.

 

Share This Article