ಹಿಂದೂಗಳನ್ನು ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡ್ ರದ್ದು – ಯತ್ನಾಳ್ ಕಿಡಿ

Public TV
1 Min Read

ವಿಜಯಪುರ: ಹಿಂದೂಗಳನ್ನು ಟಾರ್ಗೆಟ್ ಮಾಡಿ ಬಿಪಿಎಲ್ ಕಾರ್ಡ್ (BPL Card) ರದ್ದು ಮಾಡಲಾಗಿದೆ ಎಂದು ವಿಜಯಪುರ (Vijayapura) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂಗಳ ರೇಷನ್ ಕಾರ್ಡ್ ರದ್ದು ಮಾಡುತ್ತಿದೆ. ಅವರನ್ನು ಟಾರ್ಗೆಟ್ ಮಾಡಿಯೇ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಇದೇ ವಿಷಯವಿಟ್ಟುಕೊಂಡು ಅಧಿವೇಶನದಲ್ಲಿ ಇದರ ವಿರುದ್ಧ ಹೋರಾಟ ಮಾಡಲಿದ್ದೇವೆ. ಸಿದ್ದರಾಮಯ್ಯ ಹಿಂದೂಗಳ ವೋಟು ಬೇಡ ಎಂದಿದ್ದಾರೆ. ಅದಕ್ಕೆ ಹಿಂದೂಗಳ ರೇಷನ್ ಕಡಿತವಾಗುತ್ತಿದೆ ಎಂದು ನನಗೂ ಮಾಹಿತಿ ಬಂದಿದೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ನಬಾರ್ಡ್ ಸಾಲದ ಮೊತ್ತ ಹೆಚ್ಚಿಸುವಂತೆ ಕೇಂದ್ರ ಹಣಕಾಸು ಸಚಿವರಿಗೆ ಮನವಿ: ಸಿದ್ದರಾಮಯ್ಯ

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಗಳ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಪ್ರಸ್ತಾಪವಾಗುತ್ತಿದೆ. ರದ್ದಾದ ಗ್ರಾಹಕರ ಯಾದಿ ತೆಗೆದುಕೊಳ್ಳುತ್ತೇವೆ. ಇದನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಧರಣಿ ಮಾಡುತ್ತೇವೆ. ಹಿಂದೂಗಳಿಗೆ ರೇಷನ್ ಕಾರ್ಡನಲ್ಲಿ ಅನ್ಯಾಯವಾಗಬಾರದು ಎಂದು ಆಗ್ರಹಿಸಿದರು.

ಕಾಂಗ್ರೆಸ್ ಹಿಂದೂಗಳನ್ನ ಟಾರ್ಗೆಟ್ ಮಾಡುತ್ತಿದೆ. ಯಾರಿಗೆ ಅನ್ಯಾಯವಾಗಿದೆ ಅವರ ಪರ ಸದನದಲ್ಲಿ ಧ್ವನಿ ನಾವು ಎತ್ತುತ್ತೇವೆ. ಮೊದಲು ಮಾಹಿತಿ ಪಡೆಯುತ್ತೇವೆ. ಪ್ಯಾನ್ ಕಾರ್ಡ್ ಅಪ್ಲಿಕೇಶನ್ ಹಾಕಿದವರ ರೇಷನ್ ಕಾರ್ಡ್ ರದ್ದಾಗಿವೆ. ಇವರ ಟಾರ್ಗೆಟ್ ಹಿಂದೂಗಳಾಗಿದ್ದಾರೆ. ವೋಟು ಹಾಕಿಲ್ಲ ಎಂದು ಹಿಂದೂಗಳನ್ನ ಟಾರ್ಗೆಟ್ ಮಾಡುತ್ತಿದ್ದಾರೆ. ಹಿಂದೂಗಳನ್ನು ತುಳಿಯಬೇಕೆಂದು ಹೀಗೆ ಮಾಡುತ್ತಿದ್ದಾರೆ ಎಂದರು.ಇದನ್ನೂ ಓದಿ: ವಿಕ್ರಂಗೌಡ ಹತ್ಯೆ | ನಕ್ಸಲ್ ಚಟುವಟಿಕೆ ನಿಗ್ರಹಿಸಲು ಎನ್‌ಕೌಂಟರ್: ಸಿದ್ದರಾಮಯ್ಯ

 

Share This Article