ಬೆಂಗಳೂರು: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರ ಮಾಡಿ ಬ್ರೇಕ್ ತೆಗೆದುಕೊಂಡಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇಂದು ಬೆಂಗಳೂರಿನಲ್ಲಿ ಪ್ರಚಾರಕ್ಕೆ ಧುಮುಕಿದ್ದಾರೆ.
ಹೌದು. ದರ್ಶನ್ ಅವರು ಇಂದು ನಗರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್ ಪರ ಪ್ರಚಾರಕ್ಕೆ ಇಳಿದಿದ್ದಾರೆ. ಈ ಕುರಿತು ಪಿಸ್ ಮೋಹನ್ ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.
ಟ್ವೀಟ್‍ನಲ್ಲೇನಿದೆ?
ನನ್ನ ಆತ್ಮೀಯ ಸ್ನೇಹಿತ, ಹಿತೈಷಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಳೆ(ಸೋಮವಾರ) ನನ್ನ ಜೊತೆಗೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅದರ ಜೊತೆಗೆ ಸಿವಿ ರಾಮನ್ ನಗರ ಮತ್ತು ಶಾಂತಿನಗರ ಕ್ಷೇತ್ರಗಳಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ತಾವು ಬನ್ನಿ, ಬೆಂಬಲಿಸಿ, ಆಶೀರ್ವದಿಸಿ ಎಂದು ಬರೆದುಕೊಂಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಪಿ.ಸಿ ಮೋಹನ್ ಸ್ಪರ್ಧಿಸಿದ್ರೆ, ಕಾಂಗ್ರೆಸ್ ನಿಂದ ರಿಜ್ವಾನ್ ಅರ್ಷದ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನಟ ಪ್ರಕಾಶ್ ರೈ ಕಣಕ್ಕಿಳಿದಿದ್ದಾರೆ. ಇತ್ತ ಬ್ರೇಕ್ ಬಳಿಕ ನಟ ಯಶ್ ಅವರು ಇಂದು ಮಂಡ್ಯದಲ್ಲಿ ಮತ್ತೆ ಸುಮಲತಾ ಪರ ಪ್ರಚಾರ ಆರಂಭಿಸಿದ್ದಾರೆ.
ನನ್ನ ಆತ್ಮೀಯ ಸ್ನೇಹಿತ, ಹಿತೈಷಿ, ಚಾಲೆಂಜಿಂಗ್ ಸ್ಟಾರ್ @dasadarshan ನಾಳೆ ನನ್ನ ಜೊತೆಗೆ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಜೊತೆಗೆ ಸಿವಿ ರಾಮನ್ ನಗರ ಮತ್ತು ಶಾಂತಿನಗರ ಕ್ಷೇತ್ರಗಳಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ತಾವು ಬನ್ನಿ, ಬೆಂಬಲಿಸಿ, ಆಶೀರ್ವದಿಸಿ.
— P C Mohan (@PCMohanMP) April 7, 2019