ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದರ ಬಗ್ಗೆ ತೆಲುಗು ನಟಿ ಆಶಿ ರಾಯ್ ಸ್ಪಷ್ಟನೆ

Public TV
1 Min Read

ಬೆಂಗಳೂರು ರೇವ್ ಪಾರ್ಟಿ (Rave Party) ಪ್ರಕರಣ ತೆಲುಗಿನಲ್ಲೂ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ರೇವ್ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಇದ್ದಿದ್ದರ ಬಗ್ಗೆ ಪೊಲೀಸ್ ಕಮಿಷನರ್ ಸ್ಪಷ್ಟನೆ ನೀಡಿದ್ದರು. ಈ ಬೆನ್ನಲ್ಲೇ, ಆಶಿ ರಾಯ್ (Aashi Roy) ಹೆಸರು ಕೇಳಿ ಬಂದಿತ್ತು. ಈ ವಿಚಾರವಾಗಿ ನಟಿ ಕೂಡ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ:ಶ್ರೀವಲ್ಲಿ ಫ್ಯಾನ್ಸ್‌ಗೆ ಸಿಹಿಸುದ್ದಿ- ‘ಪುಷ್ಪ 2’ ಅಪ್‌ಡೇಟ್ ಹಂಚಿಕೊಂಡ ರಶ್ಮಿಕಾ ಮಂದಣ್ಣ

ನಾನು ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜ. ಆದರೆ ಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೆಯುತ್ತಿತ್ತು ಅಂತ ನನಗೆ ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ನಂಬಿ ಎಂದು ನಟಿ ಮನವಿ ಮಾಡಿದ್ದಾರೆ. ಉದ್ಯಮದಲ್ಲಿ ಕಷ್ಟಪಟ್ಟು ಬೆಳೆದಿದ್ದೇನೆ. ದಯವಿಟ್ಟು ನನ್ನ ಬೆಂಬಲಿಸಿ ಎಂದು ನಟಿ ಮಾತನಾಡಿದ್ದಾರೆ.

ಇದೇ ವೇಳೆ ಸಂರ್ದಶನವೊಂದರಲ್ಲಿ ರೇವ್‌ ಪಾರ್ಟಿಯಲ್ಲಿ ಹೇಮಾ ಇದ್ದಿದ್ದರ ಬಗ್ಗೆ ನನಗೆ ಮಾಹಿತಿ ಇಲ್ಲ. ಹೇಮಾ ಅವರು ಮೊದಲಿನಿಂದಲೂ ಪರಿಚಿತರು ಎಂದು ಆಶಿ ರಾಯ್ ತಿಳಿಸಿದ್ದಾರೆ.

ಅಂದಹಾಗೆ, ಕೆಸ್ ಹಂಡ್ರೆಡ್, ಮಿಸ್ಟರಿ ಆಫ್ ಸಾರಿಕಾ ಮುಂತಾದ ತೆಲುಗು ಚಿತ್ರಗಳಲ್ಲಿ ಆಶಿ ರಾಯ್ ನಟಿಸಿದ್ದಾರೆ.

Share This Article