ಹಾಸನಲ್ಲಿ ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೆಟೋ ಕಳ್ಳತನ

By
1 Min Read

ಹಾಸನ: ದೇಶದೆಲ್ಲೆಡೆ ಟೊಮೆಟೋ (Tomato) ಬೆಲೆ ಗಗನಕ್ಕೇರಿದೆ. ಈ ನಡುವೆ ಹಾಸನದಲ್ಲಿ (Hassan) ಲಕ್ಷಾಂತರ ರೂ. ಮೌಲ್ಯದ ಟೊಮೆಟೋ ಕಳ್ಳತನ ಮಾಡಿರುವ ಪ್ರಸಂಗ ನಡೆದಿದೆ.

ಬೇಲೂರು (Belur) ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಟೊಮೆಟೋವನ್ನು ಚೋರರು ಎಗರಿಸಿದ್ದಾರೆ. ಗ್ರಾಮದ ಧರಣಿ ಎಂಬವರು ತಮ್ಮ ಜಮೀನಿನಲ್ಲಿ ಟೊಮೆಟೋ ಬೆಳೆದಿದ್ದರು. ಟೊಮೆಟೋ ಬೆಳೆಯಿಂದ ಉತ್ತಮ ಇಳುವರಿ ಬಂದಿದ್ದ ಹಿನ್ನೆಲೆ ಕಳೆದ ಮೂರು ದಿನದಿಂದ ಟೊಮೆಟೊ ಕೊಯ್ದು ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮತ್ತೊಂದು ಟೋಲ್ ಆರಂಭ ಎಫೆಕ್ಟ್‌ – ಬಸ್ ಟಿಕೆಟ್ ದರ ಏರಿಕೆ

ಕಳೆದ ರಾತ್ರಿ ಜಮೀನಿಗೆ ನುಗ್ಗಿರುವ ಕಳ್ಳರು 50ರಿಂದ 60 ಬ್ಯಾಗ್‌ನಷ್ಟು ಟೊಮೆಟೋ ಕೊಯ್ದಿದ್ದು, ಅಂದಾಜು ಒಂದೂವರೆ ಲಕ್ಷಕ್ಕೂ ಹೆಚ್ಚು ಮೌಲ್ಯದ ಟೊಮೆಟೋ ಕಳ್ಳತನ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದಾರೆ. ಬುಧವಾರ ಬೆಳಗ್ಗೆ ಧರಣಿ ತಮ್ಮ ಜಮೀನಿನ ಬಳಿ ಹೋದಾಗ ಟೊಮೆಟೋ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ

ಕಳ್ಳತನದ ಕುರಿತು ಧರಣಿ ಹಳೇಬೀಡು ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಲಕ್ಷಾಂತರ ಮೌಲ್ಯದ ಟೊಮೆಟೋ ಕಳೆದುಕೊಂಡ ಧರಣಿ ಕಂಗಾಲಾಗಿದ್ದಾರೆ. ಇದನ್ನೂ ಓದಿ: ಪೊಲೀಸರ ಎದುರೇ SSLC ಹುಡುಗರ ಫೈಟ್ – ಎಸ್‌ಐ ಮೂಗಿಗೆ ಗಾಯ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್