ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

Public TV
2 Min Read

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌ (Darshan), ಪವಿತ್ರಾಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರೆಯುತ್ತಾ ಎಂಬುದು ನಾಳೆ (ಜು.22) ತೀರ್ಮಾನವಾಗಲಿದೆ. ಸರ್ಕಾರದ ಪರ ವಿಚಾರಣೆ ಕೇಳಿರುವ ಸುಪ್ರಿಂ ಕೋರ್ಟ್ (Supreme Court) ನಾಳೆ ದರ್ಶನ್ ಸೇರಿ 7 ಆರೋಪಿಗಳ ಪರ ವಾದ ಆಲಿಸಲಿದೆ. ಇದನ್ನೂ ಓದಿ:  ಬಿಕ್ಲು ಶಿವ ಕೊಲೆ ಕೇಸ್‌ಗೆ ಟ್ವಿಸ್ಟ್‌ – ಪ್ರಮುಖ ಆರೋಪಿಯಿಂದ ನಟಿ ರಚಿತಾ ರಾಮ್‌ಗೆ ಭರ್ಜರಿ ಗಿಫ್ಟ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್, ಪವಿತ್ರಾಗೌಡ (Pavithra Gowda) ಹಾಗೂ ಇತರೆ ಆರೋಪಿಗಳ ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಅರ್ಜಿ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ಮುಂದುವರಿಯಲಿದೆ. ನ್ಯಾ.ಜೆ ಬಿ ಪಾರ್ದಿವಾಲಾ ನೇತೃತ್ವದ ದ್ವಿಸದಸ್ಯ ಪೀಠವು ವಿಚಾರಣೆ ಮುಂದುವರಿಸಲಿದೆ. ರಾಜ್ಯ ಸರ್ಕಾರ ಪರ ವಕೀಲರ ವಾದ ಆಲಿಸಿ, ದಾಖಲೆಗಳನ್ನು ಸ್ವೀಕರಿಸಿರುವ ಪೀಠ, ನಾಳೆ ಆರೋಪಿಗಳ ಪರ ವಕೀಲರ ವಾದ ಮಂಡನೆಯನ್ನು ಕೇಳಲಿದ್ದು, ಬಳಿಕ ಅಂತಿಮ ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ. ಇದನ್ನೂ ಓದಿ:  SBI ಬ್ಯಾಂಕ್‌ಗೆ 8 ಕೋಟಿ ವಂಚನೆ – 20 ವರ್ಷದಿಂದ ಸಿಗದವರು ಇಮೇಜ್ ಸರ್ಚ್ ಅನಾಲಿಟಿಕ್ಸ್‌ ಸಾಫ್ಟ್‌ವೇರ್‌ನಿಂದ ಸಿಬಿಐಗೆ ಲಾಕ್

ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ, ಪೊಲೀಸ್ ಇಲಾಖೆ ಪರವಾಗಿ ಹಿರಿಯ ವಕೀಲ ಸಿದ್ಧಾರ್ಥ ಲೂಥ್ರಾ ವಾದ ಮಂಡಿಸಿದ್ದು, ನಟ ದರ್ಶನ್ ಪರವಾಗಿ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ ನಿಯೋಜಿಸಲಾಗಿತ್ತು. ಆದರೆ ಅಭಿಷೇಕ್ ಮನು ಸಿಂಘ್ವಿ ಸದ್ಯ ಕರ್ನಾಟಕದ ಹೈಕೋರ್ಟ್‌ನಲ್ಲಿ ಸಿದ್ದರಾಮಯ್ಯ ಹಾಗೂ ಕರ್ನಾಟಕ ಸರ್ಕಾರದ ಪರ ವಾದ ಮಂಡನೆ ಮಾಡುತ್ತಿದ್ದಾರೆ. ಅವರೇ ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ಸರ್ಕಾರ ವಿರುದ್ಧ ವಾದ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕೆ ದರ್ಶನ್ ಈಗ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ನೇಮಿಸಿಕೊಂಡಿದ್ದು ಮಂಗಳವಾರ ಸಿಬಲ್ ವಾದ ಮಂಡಿಸಲಿದ್ದಾರೆ. ಇದಾದ ಬಳಿಕ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಇನ್ನು ಕಳೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಹೈಕೋರ್ಟ್ ತೀರ್ಪಿನ ಬಗ್ಗೆ ಬೇಸರ ವ್ಯಕ್ತಪಡಿಸಿತ್ತು. ರಾಜ್ಯ ಸರ್ಕಾರ ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿದ್ದೇವೆ. ಹೈಕೋರ್ಟ್ ಆದೇಶದಲ್ಲಿ ಚಡಪಡಿಕೆ ಎದ್ದು ಕಾಣುತ್ತಿದೆ. ಜಾಮೀನು ನೀಡಲು ಹೇಗಾದ್ರೂ ಒಂದು ಅಂಶ ಸಿಗಲಿ ಎನ್ನುವ ಚಡಪಡಿಕೆ ಕಾಣುತ್ತಿದೆ, ಹೈಕೋರ್ಟ್‌ ಸೂಕ್ತವಾಗಿ ತನ್ನ ವಿವೇಚನೆ ಬಳಸಿಲ್ಲ ಎಂದು ನ್ಯಾ.ಪಾರ್ದಿವಾಲ ಅಭಿಪ್ರಾಯಪಟ್ಟಿದ್ದರು.

ಮಂಗಳವಾರ ವಾದ ಆಲಿಸಿದ ಬಳಿಕ ಸುಪ್ರೀಂ ಕೋರ್ಟ್ ನಾಳೆಯೇ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗೀ ಕೊಲೆ ಕೇಸ್‌ನ ಆರೋಪಿ ಎ1 ಪವಿತ್ರಾ, ಎ2 ದರ್ಶನ್ ಮತ್ತೆ ಜೈಲಿಗೆ ಹೋಗ್ತಾರಾ ಅಥವಾ ಸೇಫ್ ಆಗ್ತಾರಾ ಅಂತ ಗೊತ್ತಾಗಲಿದೆ.

Share This Article