ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

Public TV
1 Min Read

ಇಸ್ಲಾಮಾಬಾದ್‌: ಭಾರತಕ್ಕೆ (India) ಬೇಕಾಗಿದ್ದ ಮೋಸ್ಟ್‌ ವಾಟೆಂಡ್‌ ಉಗ್ರ ಪಾಕಿಸ್ತಾನದ (Pakistan) ಕರಾಚಿಯಲ್ಲಿ ಗುಂಡೇಟಿಗೆ ಬಲಿಯಾಗಿದ್ದಾನೆ.

ನಿಷೇಧಿತ ಲಷ್ಕರ್‌-ಇ-ತೊಯ್ಬಾ (Lashkar-e-Taiba) ಸಂಘಟನೆಯ ಸ್ಥಾಪಕ ಸದಸ್ಯ ಉಗ್ರ ಖೈಸರ್ ಫಾರೂಕ್ (Qaiser Farooq) ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾನೆ.

ಕರಾಚಿಯ ಬೀದಿಯಲ್ಲಿ ಇತರ ವ್ಯಕ್ತಿಗಳ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಫಾರೂಕ್‌ ಮೇಲೆ ದಾಳಿ ನಡೆದಿದೆ. ಈತ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್‌ ಸಯೀದ್‌ನ (Hafiz Saeed) ಆಪ್ತ ಸಹಾಯಕನಾಗಿದ್ದ. ಇದನ್ನೂ ಓದಿ: ಭಾರತಕ್ಕೆ ಬೇಕಿದ್ದ ಮೋಸ್ಟ್‌ ವಾಂಟೆಡ್‌ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ

ಮಂಗಳವಾರ ಹಫೀಜ್‌ ಸಯೀದ್‌ ಪುತ್ರ ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಲಾಗಿತ್ತು. ಪೇಶಾವರದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕಮಾಲುದ್ದೀನ್ ಸಯೀದ್‌ನನ್ನು ಅಪಹರಣ ಮಾಡಿದ್ದರು. ಇಲ್ಲಿಯವರೆಗೆ ಕಮಾಲುದ್ದೀನ್‌ ಸಯೀದ್‌ ಎಲ್ಲಿದ್ದಾನೆ ಎಂಬ ಮಾಹಿತಿ ಲಭ್ಯವಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಆತನನ್ನು ಹತ್ಯೆ ಮಾಡಲಾಗಿದೆ ಎಂಬ ವಿಚಾರ ಚರ್ಚೆ ಆಗುತ್ತಿದೆ.

ಮುಂಬೈ ದಾಳಿ:
2008 ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ (LeT) ಭಯೋತ್ಪಾದಕರು ಪ್ರವೇಶಿಸಿದ್ದರು. ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನು ನಡೆಸಿ 166 ಜನರನ್ನು ಕೊಂದಿದ್ದರು. 300 ಕ್ಕೂ ಹೆಚ್ಚು ಜನರನ್ನು ಗಾಯಗೊಳಿಸಿದ್ದರು.

ಛತ್ರಪತಿ ಶಿವಾಜಿ ಟರ್ಮಿನಸ್ (CST) ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು.

 


Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್