ಮೈದುನನ ಜೊತೆ ಮಲಗೋಕೆ ಒತ್ತಾಯಿಸ್ತಿದ್ರು, ವರದಕ್ಷಿಣೆಗಾಗಿ ಚಿತ್ರಹಿಂಸೆ ನೀಡಿದ್ದಾರೆ – ವಿಡಿಯೋ ಮಾಡಿಟ್ಟು ಗೃಹಿಣಿ ಆತ್ಮಹತ್ಯೆ

Public TV
2 Min Read

– ಊಟದಲ್ಲಿ ವಿಷ ಹಾಕ್ತಾರೆ ಅಂತ 15 ದಿನದಿಂದ ಊಟ ಮಾಡಿಲ್ಲ ಎಂದ ಮಹಿಳೆ

ಚಿಕ್ಕಬಳ್ಳಾಪುರ: ಗಂಡ, ಅತ್ತೆ, ಮಾವ, ಮೈದುನ ಸೇರಿದಂತೆ ಸಂಬಂಧಿಕರು ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಕಿರಕುಳ ನೀಡಿದ್ದಾರೆ ಎಂದು ಆರೋಪಿಸಿ ಗೃಹಿಣಿ ಸಾಯುವ ಮುನ್ನ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಘಾಟಿ ಬಳಿಯಿರುವ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ನಡೆದಿದೆ.

ಮೃತಳನ್ನು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದ ಉಪನ್ಯಾಸಕಿ ಪುಷ್ಪ (23) ಎಂದು ಗುರುತಿಸಲಾಗಿದೆ. ಸಾಯುವ ಮುನ್ನ ವಿಡಿಯೋ ಮಾಡಿ, ಗಂಡನ ಮನೆಯವರ ವಿರುದ್ಧ ಕಿಡಿಕಾರಿ, ಕ್ರಮಕ್ಕೆ ಆಗ್ರಹಿಸಿದ್ದಾರೆ.ಇದನ್ನೂ ಓದಿ: 7 ದಿನ ಲವ್ವರ್ ಜೊತೆ ಲಾಡ್ಜ್‌ನಲ್ಲಿದ್ದ ಪುತ್ತೂರಿನ ಯುವಕ ಸಾವು – ಹೆಚ್ಚು ಮಾತ್ರೆ ಸೇವಿಸಿದ್ದರಿಂದ ಮೃತಪಟ್ಟಿರೋ ಶಂಕೆ

ಮೃತ ಪುಪ್ಪಾಳನ್ನು ತಪಸೀಹಳ್ಳಿ ಗ್ರಾಮದ ವೇಣು ಎಂಬುವವರ ಜೊತೆ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಆದ್ರೆ ವಿವಾಹವಾದ ನಂತರ ಹೆಚ್ಚಿನ ವರದಕ್ಷಿಣೆ ಹಾಗೂ ನಿವೇಶನಕ್ಕಾಗಿ ಗಂಡನ ಮನೆಯವರು ಪೀಡಿಸಿ ಕಿರಕುಳ ಕೊಡ್ತಿದ್ದರಂತೆ. ಇನ್ನೂ ಗಂಡನಿಗೆ ಎರಡನೇ ಮದುವೆಯಾಗುವ ಆಸೆಯಿದ್ದು ಮಾನಸಿಕವಾಗಿ ಕಿರುಕುಳ ಕೊಡ್ತಿದ್ದರಂತೆ. ಇಷ್ಟೇ ಅಲ್ಲದೆ ಊಟದಲ್ಲಿ ವಿಷ ಹಾಕಿ ಕೊಲೆ ಮಾಡಲು ಸಹ ಪ್ಲ್ಯಾನ್‌ ಮಾಡಿದ್ದರು ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ಇದರ ನಡುವೆ ಮೈದುನನ ಜೊತೆ ಮಲಗುವಂತೆಯೂ ಬಲವಂತ ಮಾಡಿದ್ದಾರೆ ಎಂದು ಆರೋಪ ಮಾಡಿ ಗೃಹಿಣಿ ಪುಷ್ಪ 8 ನಿಮಿಷಗಳ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪುಷ್ಪ ಸೋಮವಾರ (ಅ.20) ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂನಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಗಂಡ, ಮಾವನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಡಿಯೋದಲ್ಲಿ ಗಂಡ ವೇಣು, ಅತ್ತೆ ಭಾರತಿ, ಮಾವ ಗೋವಿಂದಪ್ಪ ಹಾಗೂ ಮೈದುನ ನಾರಾಯಣಸ್ವಾಮಿ ಸೇರಿದಂತೆ ಸಂಬಂಧಿಕಾರಾದ ಮುತ್ತೇಗೌಡ ಹಾಗೂ ಪಲ್ಲವಿ ಅವರ ಕಿರುಕುಳವೇ ನನ್ನ ಸಾವಿಗೆ ಕಾರಣ ಅವರಿಗೆ ತಕ್ಕ ಶಿಕ್ಷೆ ಕೊಡಿಸಿ, ನನ್ನ ಮೃತದೇಹವನ್ನ ಗಂಡನ ಮನೆಯೊಳಗೆ ಮಣ್ಣು ಮಾಡುವಂತೆ ಗೃಹಿಣಿ ವಿಡಿಯೋದಲ್ಲಿ ಆಗ್ರಹಿಸಿದ್ದಾಳೆ.ಇದನ್ನೂ ಓದಿ: ಕುಣಿಗಲ್‌ ಫ್ಲೈಓವರ್‌ನಲ್ಲಿ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿ

Share This Article