ವಿರಾಜಪೇಟೆ ಬಳಿ ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರೀ ದುರಂತ

1 Min Read

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ (Fire Accident) ಘಟನೆ ವಿರಾಜಪೇಟೆಯ (Virajpet) ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ನಡೆದಿದೆ.

ಕೇರಳ (Keral) ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ (Mysuru) ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಇದನ್ನೂ ಓದಿ: ಹೈದರಾಬಾದ್‌-ಬೆಂಗಳೂರು ಹೆದ್ದಾರಿಯಲ್ಲಿ ಆ್ಯಸಿಡ್‌ ಟ್ಯಾಂಕರ್‌ಗೆ ಸ್ಲೀಪರ್‌ ಬಸ್‌ ಡಿಕ್ಕಿ – ತಪ್ಪಿದ ಭಾರೀ ದುರಂತ!

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅವಘಡದಿಂದ ಕೊಡಗು, ಕೇರಳ, ಮಾಕುಟ್ಟ ರಸ್ತೆಯಲ್ಲಿ ಕೆಲವು ಸಮಯ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ – ಲಕ್ಷಾಂತರ ರೂಪಾಯಿ ಮೌಲ್ಯದ ಹತ್ತಿ ಭಸ್ಮ

Share This Article