ಚಿಕ್ಕೋಡಿ: ಟ್ರ‍್ಯಾಕ್ಟರ್ (Tractor) ಸಾಗಿಸುತ್ತಿದ್ದ ಅಪಾರ ಪ್ರಮಾಣದ ಮೇವಿಗೆ ವಿದ್ಯುತ್ ತಂತಿ ತಗುಲಿ ಸುಟ್ಟು ಭಸ್ಮವಾದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಹುಲ್ಲೋಳಿಹಟ್ಟಿ ಗ್ರಾಮದಲ್ಲಿ ನಡೆದಿದೆ.
ಹುಲ್ಲೋಳಿಹಟ್ಟಿ (Hullolihatti) ಗ್ರಾಮದ ಮುಖ್ಯ ರಸ್ತೆಯಲ್ಲಿ ಅಪಾಯ ಮಟ್ಟ ಮೀರಿ ಟ್ರ‍್ಯಾಕ್ಟರ್ ಟ್ರಾಲಿಯಲ್ಲಿ ಮೇವು ತುಂಬಿಕೊಂಡು ಹೋಗುತ್ತಿದ್ದ ಸಂದರ್ಭ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ಟ್ರಾಲಿಯಲ್ಲಿ ಇದ್ದ ಮೇವು ನೋಡು ನೋಡುತ್ತಿದ್ದಂತೆಯೇ ರಸ್ತೆ ಮಧ್ಯೆ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಜಗಳ- ಸ್ನೇಹಿತನ ಗುಪ್ತಾಂಗವನ್ನೇ ಕತ್ತರಿಸಿದ!
ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ (Fire Service) ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಸೆಖೆ ಅಂತಾ ಮನೆ ಮಹಡಿ ಮೇಲೆ ಹೋಗಿ ಮಲಗುವ ಮುನ್ನ ಎಚ್ಚರ!