ಗುಜರಾತ್‌| ಮಧ್ಯದಲ್ಲೇ ಕುಸಿದ ಸೇತುವೆ – 5 ವಾಹನಗಳು ನದಿಗೆ, 8 ಸಾವು

Public TV
1 Min Read

ಅಹಮದಾಬಾದ್: ಗುಜರಾತ್‌ ವಡೋದರಾದ (Vadodara) ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆಯ (Gambhira Bridge) ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್‌ ನದಿಗೆ (Mahisagar River) ಬಿದ್ದ ಘಟನೆ ನಡೆದಿದೆ.

ಇಂದು ಬೆಳಗ್ಗೆ 7:45 ರ ಸುಮಾರಿಗೆ ಸೇತುವೆ ಕುಸಿದಿದೆ. ಈ ಸೇತುವೆ ಮಧ್ಯ ಗುಜರಾತ್ (Gujarat) ಮತ್ತು ಸೌರಾಷ್ಟ್ರ (Saurashtra) ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿತ್ತು.

ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನಗಳು ಕೆಳಗೆ ಬಿದ್ದಿದೆ. ವಾಹನಗಳಿಂದ ಮೂವರನ್ನು ರಕ್ಷಿಸಲಾಗಿದ್ದು, 8 ಮಂದಿ ಮೃತಪಟ್ಟಿದ್ದಾರೆ.

45 ವರ್ಷದ ಹಳೆಯ ಸೇತುವೆ ಇದಾಗಿದ್ದು  ಬಹಳ ಹಿಂದಿನಿಂದಲೂ ಅಪಾಯಕಾರಿ ಸ್ಥಿತಿಯಲ್ಲಿತ್ತು. ಅದರ ಶಿಥಿಲಾವಸ್ಥೆಯ ಬಗ್ಗೆ ಸ್ಥಳೀಯರು ಪದೇ ಪದೇ ಎಚ್ಚರಿಕೆ ನೀಡುತ್ತಿದ್ದರು. ತುರ್ತು ದುರಸ್ತಿ ಅಥವಾ ಹೊಸ ರಚನೆಗಾಗಿ ಮನವಿ ಮಾಡಿದ್ದರು ಎಂದು ವರದಿಯಾಗಿದೆ.

Share This Article