ಸಾರಿಗೆ ಬಸ್ ಡಿಕ್ಕಿ – ವಿದ್ಯಾರ್ಥಿಗೆ ಗಂಭೀರ ಗಾಯ

1 Min Read

ಹಾವೇರಿ: ಸಾರಿಗೆ ಬಸ್ (Bus) ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ (Student) ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ (Haveri) ನಗರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಹಾವೇರಿ ನಗರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ ವಿದ್ಯಾರ್ಥಿ ರೋಹಿತ್ ಕೆಸರಳ್ಳಿ ಬಸ್ ನಿಲ್ದಾಣದಿಂದ ಕಾಲೇಜ್‌ಗೆ ಹೊರಟಿದ್ದ ವೇಳೆ ಅಪಘಾತವಾಗಿದೆ. ಹಾವೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ, ಪರೀಕ್ಷೆ ಬರೆಯಲು ಕಾಲೇಜಿಗೆ ಹೊರಟಿದ್ದ. ಈ ವೇಳೆ ಏಕಾಏಕಿ ಸಾರಿಗೆ ಬಸ್ ವಿದ್ಯಾರ್ಥಿಗೆ ಡಿಕ್ಕಿಯಾಗಿದೆ. ಇದನ್ನೂ ಓದಿ:  ಬಾಂಗ್ಲಾದೇಶದ ಹಿಂದೂ ವ್ಯಕ್ತಿ ದೀಪು ದಾಸ್ ಹತ್ಯೆ ಕೇಸ್‌ – ಪ್ರಮುಖ ಆರೋಪಿ ಬಂಧನ

ವಿದ್ಯಾರ್ಥಿ ಹಾವೇರಿ ತಾಲೂಕಿನ ಕೊಣನತಂಬಿಗಿ ಗ್ರಾಮದ ನಿವಾಸಿ ಎನ್ನಲಾಗಿದೆ. ಬೆನ್ನಿಗೆ ಮತ್ತು ತಲೆಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹಾವೇರಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಜೈಪುರದಿಂದ ಬೆಂಗ್ಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ಸಮಸ್ಯೆ – ಇಂದೋರ್‌ನಲ್ಲಿ ತುರ್ತು ಭೂಸ್ಪರ್ಶ

Share This Article