ಕ್ಯಾಂಟರ್ ಡಿಕ್ಕಿ – ಸಾರಿಗೆ ಬಸ್‌‌ ಟಿಕೆಟ್ ಚೆಕಿಂಗ್‌ಗೆ ಬಂದಿದ್ದ ಅಧಿಕಾರಿ ಸಾವು

1 Min Read

ಹಾಸನ: ಸಾರಿಗೆ ಬಸ್‌ ಟಿಕೆಟ್‌ ತಪಾಸಣೆಗೆ ತೆರಳುತ್ತಿದ್ದ ಚೆಕಿಂಗ್ ಇನ್ಸ್‌ಪೆಕ್ಟರ್‌ಗೆ ಕ್ಯಾಂಟರ್‌ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಲೂರು (Aluru) ತಾಲೂಕಿನ ಪಾಳ್ಯ ಬಳಿ ನಡೆದಿದೆ.

ಮೃತರನ್ನು ಶಕುನಿಗೌಡ (57) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಲ್ಲೂರು-ಮಗ್ಗೆ ಮಾರ್ಗದಲ್ಲಿ ಸಾರಿಗೆ ಬಸ್‌‌ ತಡೆದು ಪ್ರಯಾಣಿಕರ ಟಿಕೆಟ್ ಪರಿಶೀಲನೆ ನಡೆಸಲು ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಕ್ಯಾಂಟರ್ ಡಿಕ್ಕಿ (Accident) ಹೊಡೆದಿದೆ. ಡಿಕ್ಕಿ ರಭಸಕ್ಕೆ ಅಧಿಕಾರಿ ಸ್ಥಳದ್ಲಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ

ಅಪಘಾತದ ನಂತರ ಕ್ಯಾಂಟರ್ ನಿಲ್ಲಿಸದೆ ವಾಹನದ ಸಮೇತ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಭದ್ರಾವತಿಯಲ್ಲಿ ಡಬಲ್‌ ಮರ್ಡರ್‌ – ಐವರು ಅರೆಸ್ಟ್‌

Share This Article