ಮಂಗಳವಾರ KSRTC, BMTC ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ

Public TV
1 Min Read

ಬೆಂಗಳೂರು: ಮಂಗಳವಾರ ಕೆಎಸ್‌ಆರ್‌ಟಿಸಿ (KSRTC), ಬಿಎಂಟಿಸಿ (BMTC) ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ‌ ಕ್ರಿಯಾ ಸಮಿತಿ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಗೆ (Transport Strike) ಮುಂದಾಗುತ್ತಿರುವ ಹಿನ್ನೆಲೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸುದ್ದಿ ಬೆನ್ನಲ್ಲೇ ಈಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

4 ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗೆ ಕರೆ ನೀಡಿರುವ ಸಾರಿಗೆ ನೌಕರರು  ಪ್ರತಿಭಟನೆಗೆ ತಯಾರಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ವ್ಯತ್ಯಯದ ಆತಂಕ ಎದುರಾಗಿತ್ತು.‌ ಈ ನಿಟ್ಟಿನಲ್ಲಿ ಎರಡು ನಿಗಮಗಳು ಮಾಹಿತಿ ನೀಡಿವೆ. ಇದನ್ನೂ ಓದಿ: ಕಗ್ಗತ್ತಲಲ್ಲಿ ಪಾಕಿಸ್ತಾನ, ರಾಷ್ಟ್ರವ್ಯಾಪಿ ವಿದ್ಯುತ್ ಕಡಿತ- ಲಕ್ಷಾಂತರ ಜನರಿಗೆ ತೊಂದರೆ

ಮಾಧ್ಯಮ ಹೇಳಿಕೆಯಲ್ಲಿ ಏನಿದೆ?
ಬೆಳಗ್ಗೆ 11 ಗಂಟೆಯಿಂದ ಸಂಜೆ 5.30 ರವರೆಗೆ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಛೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿರುವುದು ಸರಿಯಷ್ಟೇ.ಆದರೆ ಈ ಸಂಬಂಧ ಕೆಎಸ್‌ಆರ್‌ಟಿಸಿ ವ್ಯಾಪ್ತಿಯ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವುದಿಲ್ಲ. ಬಸ್ಸುಗಳ‌ ಕಾರ್ಯಚರಣೆಯು ಯಥಾಸ್ಥಿತಿಯಲ್ಲಿ ‌ಇರಲಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *