Bengaluru | ಮಳೆಗೆ ಆಟೋದ ಮೇಲೆ ಬಿದ್ದ ಮರ – ಚಾಲಕ ಸಾವು

Public TV
1 Min Read

ಬೆಂಗಳೂರು: ಭಾರೀ ಗಾಳಿ-ಮಳೆಗೆ ಆಟೋದ (Auto) ಮೇಲೆ ಮರ ಬಿದ್ದ ಪರಿಣಾಮ ಆಟೋ ಚಾಲಕ (Auto Driver) ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ಸಿಕೆ ಅಚ್ಚುಕಟ್ಟು ಬಳಿಯ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಇಟ್ಟಮಡು ಮೂಲದ ಆಟೋ ಚಾಲಕ ಮಹೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಜೆ 7:30ರ ಸುಮಾರಿಗೆ ಈ ಘಟನೆ ನಡೆದಿದೆ. ಇದನ್ನೂ ಓದಿ: ಬೆಂಗಳೂರಿನ ಹಲವೆಡೆ ಆಲಿಕಲ್ಲು ಮಳೆ – ವಾಹನ ಸವಾರರ ಪರದಾಟ

ನಗರದ ವಿವಿಧ ಕಡೆಗಳಲ್ಲಿ ಇಂದು ಭಾರೀ ಮಳೆ, ಗಾಳಿ ಶುರುವಾಗಿತ್ತು. ಆಟೋಗೆ ಗ್ಯಾಸ್ ತುಂಬಿಸಿಕೊಂಡು ಬರುತ್ತಿದ್ದ ವೇಳೆ ಜೋರು ಗಾಳಿ ಬೀಸಿದ ಪರಿಣಾಮ ಆಟೋ ಮೇಲೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಚಾಲಕ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಕಾರಿನ ಮೇಲೂ ಮರ ಬಿದ್ದಿದ್ದು, ಕಾರಿನಲ್ಲಿ ಇದ್ದವರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಇದನ್ನೂ ಓದಿ: ನೀವು ಬರೋದು ಬೇಡ – ತನ್ನ ಪ್ರಜೆಗಳನ್ನೇ ದೇಶಕ್ಕೆ ಸೇರಿಸದ ಪಾಕ್‌

Share This Article