BIFFES 2023- ‘ಕಾಂತಾರ’ ಚಿತ್ರಕ್ಕೆ ಗೌರವ : ಚಿತ್ರೋತ್ಸವದ ಉದ್ಘಾಟನಾ ಸಿನಿಮಾವಾಗಿ ಆಯ್ಕೆ

Public TV
2 Min Read

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ (Kantara) ಸಿನಿಮಾಗೆ ಮತ್ತೊಂದು ಗೌರವ ದೊರೆತಿದೆ. ವಿಶ್ವಸಂಸ್ಥೆಯು ಜಿನಿವಾದಲ್ಲಿ ಸಿನಿಮಾ ಪ್ರದರ್ಶನ ಆಯೋಜನೆ ಮಾಡಿದ್ದ ಬೆನ್ನಲ್ಲೇ ಕರ್ನಾಟಕ ಚಲನಚಿತ್ರ ಅಕಾಡೆಮಿ ತನ್ನ ಚಿತ್ರೋತ್ಸವದ ಉದ್ಘಾಟನಾ ಸಿನಿಮಾವಾಗಿ ಆಯ್ಕೆ ಮಾಡಿಕೊಂಡಿದೆ. ನಾಳೆ 14ನೇ ಬೆಂಗಳೂರು (Bangalore) ಅಂತಾರಾಷ್ಟ್ರೀತ ಚಿತ್ರೋತ್ಸವ ಆರಂಭವಾಗಲಿದ್ದು, ಉದ್ಘಾಟನಾ ಸಿನಿಮಾವಾಗಿ ಕಾಂತರ ಆಯ್ಕೆಯಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ವಿಷಯ ಹಂಚಿಕೊಂಡ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್, ‘ವಿಶ್ವಮಟ್ಟದಲ್ಲಿ ಕಾಂತಾರ ಚಿತ್ರಕ್ಕೆ ಮನ್ನಣೆ ಸಿಕ್ಕಿದೆ. ಅದನ್ನು ಗೌರವಿಸುವ ಉದ್ದೇಶದಿಂದ ಉದ್ಘಾಟನಾ ಸಿನಿಮಾವಾಗಿ ಕಾಂತಾರವನ್ನು ಆಯ್ಕೆ ಮಾಡಿಕೊಂಡಿದ್ದೇವೆ. ಈ ಸಿನಿಮಾವನ್ನು ಈಗಾಗಲೇ ಬಹುತೇಕರು ನೋಡಿರಬಹುದು. ಆದರೆ, ಗೌರವ ನೀಡುವ ದೃಷ್ಟಿಯಿಂದ ಪ್ರದರ್ಶನ ಮಾಡಲಾಗುತ್ತಿದೆ’ ಎಂದರು. ಇದನ್ನೂ ಓದಿ:`ಸಾಮಿ ಸಾಮಿ’ ಹಾಡಿಗೆ ಸ್ಟೆಪ್ ಹಾಕಿ ಎಂದ ಅಭಿಮಾನಿಗೆ ನೋ ಎಂದ ರಶ್ಮಿಕಾ ಮಂದಣ್ಣ

ನಾಳೆಯಿಂದ ನಡೆಯಲಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆರ್.ಆರ್.ಆರ್ ಸೇರಿದಂತೆ ಸಾಕಷ್ಟು ಹಿಟ್ ಚಿತ್ರಗಳಿಗೆ ಕಥೆ, ಚಿತ್ರಕಥೆ ಬರೆದಿರುವ ವಿ.ವಿಜಯೇಂದ್ರ ಪ್ರಸಾದ್ ಬರಲಿದ್ದಾರೆ. ಚಿತ್ರೋತ್ಸವದ ಸ್ಮರಣ ಸಂಚಿಕೆಯನ್ನು ಅವರು ಉದ್ಘಾಟನಾ ಸಮಾರಂಭದಲ್ಲಿ ಬಿಡುಗಡೆಗೊಳಿಸಲಿದ್ದಾರೆ. ನಾಳೆಯಿಂದ ಚಿತ್ರೋತ್ಸವಕ್ಕೆ ಚಾಲನೆ ಸಿಗಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಚಿತ್ರೋತ್ಸವವನ್ನು  ಉದ್ಘಾಟಿಸಲಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡೆಮಿ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಜಂಟಿಯಾಗಿ ಆಯೋಜಿಸಿರುವ ಈ ಚಿತ್ರೋತ್ಸವ ಮಾರ್ಚ್ 23 ರಿಂದ ಆರಂಭವಾಗಿ 30ನೇ ತಾರೀಖಿನವರೆಗೂ ನಡೆಯಲಿದೆ. ನೂರಕ್ಕೂ ಹೆಚ್ಚು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ನಿರ್ದೇಶಕ, ಸಿನಿಮಾಟೋಗ್ರಾಫರ್ ಗೋವಿಂದ್ ನಿಹಾಲಾನಿ, ನಟಿ ರಮ್ಯಾ ಕೃಷ್ಣ, ಅಭಿಷೇಕ್ ಅಂಬರೀಶ್, ಸಪ್ತಮಿ ಗೌಡ ವಿಶೇಷ ಅತಿಥಿಗಳಾಗಿ ಆಗಮಿಸುತ್ತಿದ್ದು, ಹರ್ಷಿಕಾ ಪೂಣಚ್ಚ ದೀಪ ಕಾರ್ಯಕ್ರಮಕ್ಕೆ ನೆರವು ನೀಡಲಿದ್ದಾರೆ. ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮಾರ್ಚ್ 24 ರಿಂದ ಬೆಂಗಳೂರಿನ ಒರಯನ್ ಮಾಲ್, ಕಲಾವಿದರ ಸಂಘ ಹಾಗೂ ಸುಚಿತ್ರಾ ಫಿಲ್ಮ್ಸ್ ನಲ್ಲಿ ಚಿತ್ರ ಪ್ರದರ್ಶನಗಳು ನಡೆಯಲಿವೆ. ಚಿತ್ರ ಪ್ರದರ್ಶನ, ಗೋಷ್ಠಿಗಳು, ಸಂದರ್ಶನ, ಸಿನಿಮಾ ಸ್ಪರ್ಧೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳನ್ನು ಚಿತ್ರೋತ್ಸವದ ಭಾಗವಾಗಿ ಆಯೋಜನೆ ಮಾಡಿದ್ದಾರೆ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ ಅಶೋಕ್ ಕಶ್ಯಪ್.

Share This Article
Leave a Comment

Leave a Reply

Your email address will not be published. Required fields are marked *