ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ

2 Min Read

ಚೆನ್ನೈ: ಹುಟ್ಟುಹಬ್ಬದ ಹಿನ್ನೆಲೆ ತಿರುಪತಿಗೆ ತೆರಳಿದ್ದ ನಟಿ ತ್ರಿಷಾ ಕೃಷ್ಣನ್ (Trisha Krishnan) ಅಲ್ಲಿಂದ ನೇರವಾಗಿ ಚೆನ್ನೈನಲ್ಲಿರುವ ವಿಜಯ್ (Vijay) ಮನೆಗೆ ಆಗಮಿಸಿದ್ದಾರೆ.

ತಮಿಳುನಾಡಿನಲ್ಲಿ ಟಿವಿಕೆ ಭರ್ಜರಿ ಮುನ್ನಡೆ ಸಾಧಿಸಿದ ಹಿನ್ನೆಲೆ ವಿಜಯ್ ಅವರ ಮನೆಯಲ್ಲಿ ಸಂಭ್ರಮಾಚರಣೆ ಶುರುವಾಗಿದೆ. ಇದೇ ಹೊತ್ತಿನಲ್ಲಿ ತ್ರಿಷಾ ಕೂಡ ವಿಜಯ್ ಮನೆಗೆ ಆಗಮಿಸಿದ್ದಾರೆ. ತಿರುಪತಿ ಪ್ರಸಾದವನ್ನು ಕೊಡಲು ಮತ್ತು ಅಭಿನಂದನೆಗಳನ್ನು ತಿಳಿಸಲು ತ್ರಿಷಾ ವಿಜಯ್ ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪ್ರಧಾನಿ ಮೋದಿ ದೂರದೃಷ್ಟಿಯ ನಾಯಕತ್ವಕ್ಕೆ ಎನ್‌ಡಿಎ ಭರ್ಜರಿ ಗೆಲುವು – ಅಭಿನಂದನೆ ಸಲ್ಲಿಸಿದ ಹೆಚ್‌ಡಿಕೆ

ಸದ್ಯ ವಿಜಯ್ ಮನೆ ಸುತ್ತಮುತ್ತ ಭಾರೀ ಭದ್ರತೆ ಆಯೋಜನೆ ಮಾಡಲಾಗಿದ್ದು, ಅಭಿಮಾನಿಗಳನ್ನು ನಿಯಂತ್ರಿಸಲು ಭಾರೀ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಅಸ್ಸಾಂ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಗೌರವ್ ಗೊಗೊಯ್‌ಗೆ ಹೀನಾಯ ಸೋಲು

43ನೇ ಹುಟ್ಟುಹಬ್ಬದ ಹಿನ್ನೆಲೆ ನಟಿ ತ್ರಿಷಾ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಇದೇ ವೇಳೆ ತಮಿಳುನಾಡಿನಲ್ಲಿ ವಿಜಯ್ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ ಎನ್ನಲಾಗಿದೆ. ಇದಕ್ಕೂ ಮುನ್ನ ಮಾರ್ಚ್ನಲ್ಲಿ, ಚೆನ್ನೈನಲ್ಲಿ ನಡೆದ ವಿವಾಹ ಆರತಕ್ಷತೆಯಲ್ಲಿ ವಿಜಯ್ ಹಾಗೂ ತ್ರಿಶಾ ಕೃಷ್ಣನ್ ಒಟ್ಟಿಗೆ ಒಂದೇ ತರಹದ ಉಡುಗೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲದೇ 2025ರ ಡಿಸೆಂಬರ್‌ನಲ್ಲಿ ವಿಜಯ್ ಹಾಗೂ ಅವರ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಕೋಲ್ಕತ್ತಾ ಮತ ಎಣಿಕೆ ಕೇಂದ್ರದಲ್ಲಿ ಗಲಾಟೆ; ಕೂಚ್ ಬೆಹಾರ್‌ನಲ್ಲಿ ಹೊಡೆದಾಡಿಕೊಂಡ ಬಿಜೆಪಿ-ಟಿಎಂಸಿ ಕಾರ್ಯಕರ್ತರು

ದಕ್ಷಿಣ ಭಾರತದ ಪ್ರಮುಖ ರಾಜ್ಯಗಳಲ್ಲೊಂದಾದ ತಮಿಳುನಾಡಿನ 234 ವಿಧಾನಸಭಾ ಕ್ಷೇತ್ರಗಳಿಗೆ ಏ.23 ರಂದು ಮತದಾನ ನಡೆದಿತ್ತು. ರಾಜ್ಯದಲ್ಲಿ ದಾಖಲೆಯ 4,654 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಪೈಕಿ 3,579 ಪುರುಷ ಮತ್ತು 443 ಮಹಿಳಾ ಮತದಾರರು ಸ್ಪರ್ಧಿಸಿದ್ದರು. 84.69% ಮತದಾನ ನಡೆದಿತ್ತು. ರಾಜ್ಯದಲ್ಲಿ ಬಹುಮತಕ್ಕೆ 118 ಸ್ಥಾನಗಳು ಬೇಕಿದ್ದವು. ರಾಜ್ಯದಲ್ಲಿ ಆಡಳಿತಾರೂಢ ಡಿಎಂಕೆ ಮೈತ್ರಿಕೂಟ, ಎಐಎಡಿಎಂಕೆ ಮೈತ್ರಿಕೂಟ, ನಟ ವಿಜಯ್ ನೇತೃತ್ವದ ಟಿವಿಕೆ, ಎನ್‌ಟಿಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು. ಇದನ್ನೂ ಓದಿ: ದಳಪತಿ ‘ವಿಶಲ್’ಗೆ ಬೆಚ್ಚಿಬಿದ್ದ ದ್ರಾವಿಡ ಕೋಟೆ – ‘ಗಿಲ್ಲಿ’ ಅಬ್ಬರಕ್ಕೆ ಡಿಎಂಕೆ ಧೂಳಿಪಟ!

ಕಳೆದ ಚುನಾವಣೆಯಲ್ಲಿ 10 ವರ್ಷಗಳ ನಂತರ ಎಐಎಡಿಎಂಕೆ ಆಡಳಿತವನ್ನು ಅಂತ್ಯಗೊಳಿಸಿ ಡಿಎಂಕೆ ನೇತೃತ್ವದ ಮೈತ್ರಿಕೂಟ ಭರ್ಜರಿ ಜಯ ಸಾಧಿಸಿತು. ಡಿಎಂಕೆ ಮೈತ್ರಿಕೂಟ: 159 ಸ್ಥಾನಗಳು (ಡಿಎಂಕೆ ಏಕಾಂಗಿಯಾಗಿ 133 ಸ್ಥಾನ ಗೆದ್ದು ಸ್ಪಷ್ಟ ಬಹುಮತ ಪಡೆಯಿತು). ಎಐಎಡಿಎಂಕೆ ಮೈತ್ರಿಕೂಟ: 75 ಸ್ಥಾನ ಗೆದ್ದಿದ್ದವು. ಇದನ್ನೂ ಓದಿ: ಅಂತಿಮ ಫಲಿತಾಂಶಕ್ಕೂ ಮುನ್ನವೇ ವಿಜಯ್ ಮನೆಯಲ್ಲಿ ಸಂಭ್ರಮಾಚರಣೆ

Share This Article