ಉಗ್ರ ನಿಜ್ಜರ್ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ: ಕೆನಡಾ ಗಂಭೀರ ಆರೋಪ

Public TV
1 Min Read

ಒಟ್ಟಾವಾ: ಇತ್ತೀಚೆಗೆ ನಡೆದ ಖಲಿಸ್ತಾನಿ (Khalistani) ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ (India) ಕೈವಾಡವಿದೆ ಎಂದು ಕೆನಡಾ ಗಂಭೀರ ಆರೋಪವೊಂದನ್ನು ಮಾಡಿದೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau), ಹೌಸ್ ಆಫ್ ಕಾಮನ್ಸ್ ಅನ್ನು ಉದ್ದೇಶಿಸಿ ಮಾತನಾಡುತ್ತಾ, ಜೂನ್‍ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಾಗಿದೆ. ಈ ಪ್ರಕರಣದಲ್ಲಿ ಭಾರತೀಯ ಏಜೆಂಟರ ಕೈವಾಡದ ಪ್ರಬಲ ಆರೋಪಗಳು ಇವೆ ಎಂದು ಹೇಳಿದರು. ಈ ಆರೋಪಗಳ ಬಗ್ಗೆ ಸರ್ಕಾರ ಸಕ್ರಿಯವಾಗಿ ತನಿಖೆ ನಡೆಸುತ್ತಿದೆ ಎಂದರು.

ಈ ಆರೋಪ ಕೇಳಿ ಬಂದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಮುಖ್ಯಸ್ಥರನ್ನು ಉಚ್ಛಾಟಿಸಿದೆ. ಕೆನಡಾದ ಈ ರಾಜತಾಂತ್ರಿಕ ಕ್ರಮವು ಒಟ್ಟಾವಾ ಮತ್ತು ದೆಹಲಿ ನಡುವಿನ ಸಂಬಂಧವನ್ನು ಮೊದಲಿಗಿಂತ ಹೆಚ್ಚು ಹದಗೆಡಿಸಿದೆ. ಇದನ್ನೂ ಓದಿ: ಭಾರತಕ್ಕೆ ಮೋಸ್ಟ್‌ ವಾಂಟೆಡ್‌ ಆಗಿದ್ದ ಖಲಿಸ್ತಾನಿ ಉಗ್ರ ಗುಂಡಿನ ದಾಳಿಗೆ ಬಲಿ

ಈ ಸಂಬಂಧ ಕೆನಡಾದ (Canada) ವಿದೇಶಾಂಗ ಸಚಿವೆ ಮೆಲಾನಿ ಜೋಲೀ ಪ್ರತಿಕ್ರಿಯಿಸಿ, ಟ್ರುಡೊ ಸರ್ಕಾರವು ತಕ್ಷಣದ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ಅಧಿಕಾರಿಯ ಹೆಸರು ಉಲ್ಲೇಖಿಸದ ವಿದೇಶಾಂಗ ಸಚಿವರು, ಇಂದು ನಾವು ಹಿರಿಯ ಭಾರತೀಯ ರಾಜತಾಂತ್ರಿಕರನ್ನು ಕೆನಡಾದಿಂದ ಹೊರಹಾಕಿದ್ದೇವೆ. ಉಚ್ಛಾಟಿತ ಭಾರತೀಯ ರಾಜತಾಂತ್ರಿಕರು ಕೆನಡಾದಲ್ಲಿರುವ ಭಾರತದ ವಿದೇಶಿ ಗುಪ್ತಚರ ಸಂಸ್ಥೆ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (RAW) ಮುಖ್ಯಸ್ಥರಾಗಿದ್ದಾರೆ ಎಂದು ಜೋಲಿ ಹೇಳಿದ್ದಾರೆ.

ಜೂನ್ 18 ರಂದು ಹರ್ದೀಪ್ ಸಿಂಗ್ ನಿಜ್ಜರ್ ಮೇಲೆ ಗುಂಡು ಹಾರಿಸಲಾಗಿತ್ತು. ಭಾರತವು ಈತನನ್ನು ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಘೋಷಿಸಿತು ಎಂಬುವುದು ಉಲ್ಲೇಖನೀಯ. ಈ ಮಧ್ಯೆ ಜೂನ್ 18 ರಂದು, ವ್ಯಾಂಕೋವರ್‍ನ ಉಪನಗರವಾದ ಸರ್ರೆಯ ಗುರುದ್ವಾರದ ಬಳಿ ನಿಜ್ಜರ್‍ನನ್ನು ಗುಂಡಿಕ್ಕಿ ಕೊಲ್ಲಲಾಯಿತು. ನಿಜ್ಜರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ನಡುವೆ ಉದ್ವಿಗ್ನತೆ ನಿರಂತರವಾಗಿ ಹೆಚ್ಚುತ್ತಿದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್