White House Dinner Shooting| ಸೀಕ್ರೆಟ್ ಸರ್ವಿಸ್ ಅದ್ಭುತವಾಗಿ ಕೆಲಸ ಮಾಡಿದೆ, ದಾಳಿಕೋರನನ್ನು ಬಂಧಿಸಲಾಗಿದೆ: ಟ್ರಂಪ್‌

1 Min Read

ವಾಷಿಂಗ್ಟನ್‌: ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿದ್ದು, ಶಂಕಿತ ದಾಳಿಕೋರನನ್ನು ಬಂಧಿಸಲಾಗಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಹೇಳಿದ್ದಾರೆ.

- Advertisement -

ಶ್ವೇತಭವನದ ಸಮೀಪ ವಾಷಿಂಗ್ಟನ್ ಹಿಲ್ಟನ್ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವರದಿಗಾರರ ಔತಣಕೂಟದ (White House Correspondents’ Dinner) ವೇಳೆ ನಡೆದ ಗುಂಡಿನ ದಾಳಿಯ ಬಗ್ಗೆ ಟ್ರಂಪ್‌ ತಮ್ಮ ಟ್ರೂಥ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ ಪ್ರತಿಕ್ರಿಯಿಸಿದ್ದಾರೆ.

- Advertisement -

- Advertisement -

ಸೀಕ್ರೆಟ್ ಸರ್ವಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಅದ್ಭುತವಾಗಿ ಕೆಲಸ ಮಾಡಿವೆ ಎಂದು ಟ್ರಂಪ್ ಹೇಳಿದ್ದಾರೆ. ಅವರು ಅತ್ಯಂತ ವೇಗವಾಗಿ ಮತ್ತು ಧೈರ್ಯದಿಂದ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

 

ಶೂಟರ್‌ನನ್ನು ಈಗಾಗಲೇ ಬಂಧಿಸಲಾಗಿದೆ. ನಾನು ಕಾರ್ಯಕ್ರಮವನ್ನು ಮುಂದುವರಿಸಲು ಸೂಚಿಸಿದ್ದೇನೆ. ಆದರೆ ಭದ್ರತೆಯ ದೃಷ್ಟಿಯಿಂದ ಅಂತಿಮ ನಿರ್ಧಾರವನ್ನು ಅಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದೇನೆ. ಈ ಅದ್ಧೂರಿ ಕಾರ್ಯಕ್ರಮವನ್ನು ಮುಂದಿನ 30 ದಿನಗಳೊಳಗೆ ಮತ್ತೆ ಆಯೋಜಿಸಲಾಗುವುದು ಎಂದು ಘೋಷಿಸಿದ್ದಾರೆ.

ಈ ಸರಣಿ ಘಟನೆಗಳಿಂದಾಗಿ ಅಮೆರಿಕದ ರಾಜಕೀಯ ವಲಯದಲ್ಲಿ ತೀವ್ರ ಕಳವಳ ವ್ಯಕ್ತವಾಗಿದ್ದು, ತನಿಖೆ ಮುಂದುವರಿದಿದೆ.

Share This Article