ನವದೆಹಲಿ/ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಇಂದು (ಮಂಗಳವಾರ) ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ಕರೆ ಮಾಡಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
Received a call from President Trump and had a useful exchange of views on the situation in West Asia. India supports de-escalation and restoration of peace at the earliest. Ensuring that the Strait of Hormuz remains open, secure and accessible is essential for the whole world.…
— Narendra Modi (@narendramodi) March 24, 2026
ಮುಖ್ಯವಾಗಿ ಹಾರ್ಮುಜ್ ಜಲಸಂಧಿ (Strait of Hormuz) ಮುಕ್ತವಾಗಿಸುವ ಕಾರ್ಯತಂತ್ರಗಳು ಹಾಗೂ ಮಧ್ಯಪ್ರಾಚ್ಯದ ಬಿಕ್ಕಟ್ಟಿನ ಕುರಿತು ಉಭಯ ನಾಯಕರು ಪ್ರಸ್ತಾಪಿಸಿದ್ದಾರೆ. ಇದನ್ನೂ ಓದಿ: ಅಮೆರಿಕ ವಿನಾಯ್ತಿ ಬೆನ್ನಲ್ಲೇ ಇರಾನ್‌ನಿಂದ 50 ಲಕ್ಷ ಬ್ಯಾರಲ್ ಕಚ್ಚಾ ತೈಲ ಖರೀದಿಸಿದ ರಿಲಯನ್ಸ್
ಅಮೆರಿಕದ (USA) ರಾಯಭಾರಿ ಸೆರ್ಗಿಯೊ ಗೋರ್ ಅವರು ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ʻಅಧ್ಯಕ್ಷ ಟ್ರಂಪ್ ಅವರು ಪ್ರಧಾನಿ ಮೋದಿ (PM Modi) ಅವರೊಂದಿಗೆ ಮಾತನಾಡಿದ್ದಾರೆ. ಮಧ್ಯಪ್ರಾಚ್ಯದ ಪ್ರಸ್ತುತ ಸ್ಥಿತಿಗತಿ ಮತ್ತು ಹಾರ್ಮುಜ್ ಜಲಸಂಧಿ ಮುಕ್ತವಾಗಿಸುವ ಮಹತ್ವದ ಕುರಿತು ಚರ್ಚಿಸಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ
ಇದಾದ ಕೆಲವೇ ನಿಮಿಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೂ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದಾರೆ. ʻಅಧ್ಯಕ್ಷ ಟ್ರಂಪ್ ಅವರಿಂದ ಕರೆ ಸ್ವೀಕರಿಸಿ ಮಾತನಾಡಿದೆ. ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಕುರಿತು ಉಪಯುಕ್ತ ಅಭಿಪ್ರಾಯಗಳನ್ನ ಹಂಚಿಕೊಂಡೆವು. ಭಾರತವು ಉದ್ವಿಗ್ನತೆಯನ್ನ ಕಡಿಮೆ ಮಾಡಲು ಮತ್ತು ಸಾಧ್ಯವಾದಷ್ಟು ಬೇಗ ಶಾಂತಿಯನ್ನ ಪುನಃಸ್ಥಾಪಿಸಲು ಬೆಂಬಲಿಸುತ್ತದೆ. ಹಾರ್ಮುಜ್ ಜಲಸಂಧಿಯು ಮುಕ್ತ ಮತ್ತು ಸುರಕ್ಷಿತ ಮತ್ತು ಪ್ರವೇಶಿಸಬಹುದಾದ ಸ್ಥಳವಾಗಿರುವುದನ್ನ ಖಚಿತಪಡಿಸಿಕೊಳ್ಳುವುದು ಇಡೀ ಜಗತ್ತಿಗೆ ಅತ್ಯಗತ್ಯವಾಗಿದೆ. ಅಲ್ಲದೇ ಶಾಂತಿ ಮತ್ತು ಸ್ಥಿರತೆ ಕಾಯ್ದುಕೊಳ್ಳಲು ಅಗತ್ಯವಿರುವ ಎಲ್ಲಾ ಪ್ರಯ್ನಗಳ ಕುರಿತು ಚರ್ಚಿಸಲು ಸಂಪರ್ಕದಲ್ಲಿರಲು ಒಪ್ಪಿಕೊಂಡಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ



