ಕಾರ್ಮಿಕ ಮುಖಂಡ ಎನ್.ಶಿವಣ್ಣ ಹೃದಯಾಘಾತದಿಂದ ನಿಧನ

Public TV
1 Min Read

ತುಮಕೂರು: ಕಾರ್ಮಿಕ ಮುಖಂಡ ಎನ್.ಶಿವಣ್ಣ (80) ಹೃದಯಾಘಾತದಿಂದ ಬೆಂಗಳೂರಿನ ಮಗನ ಮನೆಯಲ್ಲಿ ನಿಧನರಾದರು.

ಪತ್ನಿ, ಪುತ್ರ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಶಿವಣ್ಣ ಅವರ ಇಚ್ಛೆಯಂತೆ ದೇಹವನ್ನು ರಾಜರಾಜೇಶ್ವರಿ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು. ಗುಬ್ಬಿ ತಾಲೂಕು ನಂದಿಹಳ್ಳಿ ಅವರ ಜನ್ಮಸ್ಥಳವಾಗಿದೆ. ಇದನ್ನೂ ಓದಿ: ಅಸ್ಸಾಂನಲ್ಲಿ ಪ್ರವಾಹ – 4 ಲಕ್ಷಕ್ಕೂ ಅಧಿಕ ಮಂದಿಗೆ ಹಾನಿ, ಕೊಚ್ಚಿಹೋದ ರಸ್ತೆ, ರೈಲು ಹಳಿ

ಶಿವಣ್ಣ ಅವರು ಎಐಟಿಯುಸಿ ರಾಜ್ಯ ಕಾರ್ಯದರ್ಶಿ, ಸಿಪಿಐ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ಅಧ್ಯಕ್ಷರಾಗಿ ಸಂಘಟನೆ ಮುನ್ನಡೆಸಿದ್ದರು. ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎದುರು ಸ್ಪರ್ಧಿಸಿ ಪರಾಭವಗೊಂಡಿದ್ದರು. ಒಂದು ರೀತಿಯಲ್ಲಿ ದೇವೇಗೌಡರ ಸೋಲಿಗೂ ಕಾರಣರಾದರು ಎಂದು ವಿಶ್ಲೇಷಿಸಲಾಗಿತ್ತು. ಒಮ್ಮೆ ತುರುವೇಕೆರೆ ತಾಲೂಕು ಬೋರ್ಡ್ ಸದಸ್ಯರಾಗಿದ್ದರು. ಇದನ್ನೂ ಓದಿ: ಕೇಂದ್ರ ಸಚಿವ ಅಜಯ್ ಮಿಶ್ರಾ ಥೇನಿ ಸೋದರಳಿಯ ರಸ್ತೆ ಅಪಘಾತದಲ್ಲಿ ದುರ್ಮರಣ

ಡಿಪ್ಲೋಮಾ ಶಿಕ್ಷಣ ಮುಗಿಸಿ, ಅಮ್ಮಸಂದ್ರ ಸಿಮೆಂಟ್ ಕಾರ್ಖಾನೆಯಲ್ಲಿ ಉದ್ಯೋಗಕ್ಕೆ ಸೇರಿಕೊಂಡರು. ಅಲ್ಲೂ ಕಾರ್ಮಿಕ ಸಂಘಟನೆ ಕಟ್ಟಿ ಬೆಳೆಸುವ ಮೂಲಕ ಕಾರ್ಮಿಕರಿಗೆ ಹಲವು ಸವಲತ್ತು ಕೊಡಿಸಿದ್ದರು. ನಂತರ ಕಾರ್ಮಿಕ ಸಂಘಟನೆ, ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವ ವಹಿಸಿಕೊಂಡು, ಅವರಿಗೆ ನ್ಯಾಯ ಕೊಡಿಸುವ ಹೋರಾಟದಲ್ಲಿ ನಿರತರಾಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *